ದೇಶ

ಗುಜರಾತ್ ನಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ, ಮೂರನೇ ಶಕ್ತಿ ಇಲ್ಲ: ಪ್ರಧಾನಿ ಮೋದಿ ಸಹೋದರ

Lingaraj Badiger

ಅಹಮದಾಬಾದ್: ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇದೆ. ಮೂರನೆ ಸ್ಪರ್ಧಿ ಅಥವಾ ತ್ರಿಕೋನ ಸ್ಪರ್ಧೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಭಾನುವಾರ ಹೇಳಿದ್ದಾರೆ.

ಡಿಸೆಂಬರ್ ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ, ಕಾಂಗ್ರೆಸ್ ಮತ್ತು ಬಿಜೆಪಿಗೆ ತೀವ್ರ ಪೈಪೋಟಿ ನೀಡುತ್ತಿದೆ ಎಂಬ ವಿಚಾರವನ್ನು ಸ್ಪಷ್ಟವಾಗಿ ತಳ್ಳಿಹಾಕಿದರು.

ಗುಜರಾತ್ ಚುನಾವಣೆಯಲ್ಲಿ ಬಿರುಸಿನ ಪ್ರಚಾರ ಆರಂಭಿಸಿರುವ ಎಎಪಿಯ ಭವಿಷ್ಯದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಹ್ಲಾದ್ ಮೋದಿ ಅವರು ಗುಜರಾತ್ ನಲ್ಲಿ ಕಾಂಗ್ರೆಸ್ ಈಗ 'ಶೂನ್ಯ'ಕ್ಕೆ(ಶೂನ್ಯ) ಇಳಿದಿದೆ ಮತ್ತು ಬಿಜೆಪಿ ಪೂರ್ಣ ಬಲ ಹೊಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎಂಬ ಎರಡು ಪಕ್ಷಗಳ ನಡುವೆ ಸ್ಪರ್ಧೆ ಇದೆ. ಯಾವುದೇ ಮೂರನೇ ಪಕ್ಷ ಸ್ಪರ್ಧೆಯಲ್ಲಿ ಇಲ್ಲ ಎಂದರು.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಹಿಮಾಚಲ ಪ್ರದೇಶದೊಂದಿಗೆ ಫಲಿತಾಂಶ ಪ್ರಕಟವಾಗಲಿದೆ.

SCROLL FOR NEXT