ಭಗವಂತ ಮಾನ್ 
ದೇಶ

ಪಂಜಾಬ್‌ನಲ್ಲಿ ಬಂದೂಕು ಸಂಸ್ಕೃತಿಯನ್ನು ಉತ್ತೇಜಿಸುವ ಶಸ್ತ್ರಾಸ್ತ್ರಗಳು ಮತ್ತು ಹಾಡುಗಳಿಗೆ ನಿಷೇಧ!

ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ವಿರೋಧ ಪಕ್ಷಗಳ ಟೀಕೆಗಳ ನಡುವೆಯೇ ಪಂಜಾಬ್ ಸರ್ಕಾರ ಭಾನುವಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ.

ಚಂಡೀಗಢ: ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ವಿರೋಧ ಪಕ್ಷಗಳ ಟೀಕೆಗಳ ನಡುವೆಯೇ ಪಂಜಾಬ್ ಸರ್ಕಾರ ಭಾನುವಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. 

ಗನ್ ಸಂಸ್ಕೃತಿ ಮತ್ತು ಹಿಂಸೆಯನ್ನು ಉತ್ತೇಜಿಸುವ ಬಂದೂಕುಗಳು ಮತ್ತು ಹಾಡುಗಳ ಸಾರ್ವಜನಿಕ ಪ್ರದರ್ಶನಕ್ಕೆ ನಿಷೇಧ ಹೇರಿದೆ. ಅಧಿಕೃತ ಆದೇಶದ ಪ್ರಕಾರ, ರಾಜ್ಯ ಸರ್ಕಾರವು ಮುಂದಿನ ಮೂರು ತಿಂಗಳಲ್ಲಿ ಶಸ್ತ್ರಾಸ್ತ್ರ ಪರವಾನಗಿಗಳ ಮರುಪರಿಶೀಲನೆಗೆ ಆದೇಶಿಸಿದೆ. ಯಾವುದೇ ಸಮುದಾಯದ ವಿರುದ್ಧ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಸ್ಥಳಗಳು, ಮದುವೆ ಸಮಾರಂಭಗಳು ಮತ್ತು ಇತರ ಕಾರ್ಯಕ್ರಮಗಳಲ್ಲಿ ಆಯುಧಗಳನ್ನು ಒಯ್ಯುವುದು ಮತ್ತು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಶಸ್ತ್ರಾಸ್ತ್ರ ಪರವಾನಗಿಯನ್ನು ಮೂರು ತಿಂಗಳೊಳಗೆ ಪರಿಶೀಲಿಸಬೇಕು ಮತ್ತು ಯಾವುದೇ ತಪ್ಪು ವ್ಯಕ್ತಿಗೆ ಶಸ್ತ್ರಾಸ್ತ್ರ ಪರವಾನಗಿ ನೀಡಿದ್ದರೆ, ಅದನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧೆಡೆ ದಿಢೀರ್ ತಪಾಸಣೆ ನಡೆಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಆರೋಪದ ಮೇಲೆ ಎಎಪಿ ಸರ್ಕಾರ ವಿರೋಧ ಪಕ್ಷಗಳಿಂದ ಟೀಕೆಗಳನ್ನು ಎದುರಿಸುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ಎರಡು ಪ್ರಮುಖ ಘಟನೆಗಳು ನಡೆದಿತ್ತು. ನವೆಂಬರ್ 4 ರಂದು, ಶಿವಸೇನೆಯ (ತಕ್ಸಲಿ) ನಾಯಕ ಸುಧೀರ್ ಸೂರಿ ಮತ್ತು ಡೇರಾ ಸಚ್ಚಾ ಸೌಧದ ಅನುಯಾಯಿ ಪ್ರದೀಪ್ ಸಿಂಗ್ ನವೆಂಬರ್ 10ರಂದು ಹತ್ಯೆ ಮಾಡಲಾಗಿತ್ತು. 

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದು ರಾಜ್ಯ ಗೃಹ ಇಲಾಖೆ ಪೊಲೀಸ್ ಮುಖ್ಯಸ್ಥರು, ಪೊಲೀಸ್ ಆಯುಕ್ತರು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್