ಗ್ಯಾನ್ ವಾಪಿ: ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ತೀರ್ಪು ನ.17 ಕ್ಕೆ ಮುಂದೂಡಿಕೆ
ಗ್ಯಾನ್ ವಾಪಿ ಮಸೀದಿಯಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್ ನ.17 ಕ್ಕೆ ಮುಂದೂಡಿದೆ.
ವಾರಣಾಸಿ: ಗ್ಯಾನ್ ವಾಪಿ ಮಸೀದಿಯಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್ ನ.17 ಕ್ಕೆ ಮುಂದೂಡಿದೆ.
ಸಿವಿನ್ ನ್ಯಾಯಾಧೀಶ (ಹಿರಿಯ ವಿಭಾಗ) ಮಹೇಂದ್ರ ಪಾಂಡೆ, ತೀರ್ಪನ್ನು ನ.17 ಕ್ಕೆ ಮುಂದೂಡಿದ್ದಾರೆ ಎಂದು ಜಿಲ್ಲಾ ಸಹಾಯಕ ಸರ್ಕಾರಿ ವಕೀಲ ಸುಲಭ್ ಪ್ರಕಾಶ್ ಹೇಳಿದ್ದಾರೆ. ಅ.27 ರಂದು ವಿವಾದಕ್ಕೆ ಸಂಬಂಧಿಸಿದಂತೆ ಉಭಯ ಪಕ್ಷಗಳ ವಾದವನ್ನು ಆಲಿಸಿದ ಕೋರ್ಟ್, ನ.8 ರಂದು ತೀರ್ಪನ್ನು ಕಾಯ್ದಿರಿಸಿತ್ತು. ನ.8 ರಂದು ನ್ಯಾಯಾಧೀಶರು ರಜೆಯಲ್ಲಿದ್ದ ಕಾರಣ ಸೋಮವಾರಕ್ಕೆ (ನ.14) ಕ್ಕೆ ಮುಂದೂಡಲಾಗಿತ್ತು.
ಮೇ.24 ರಂದು, ವಿಶ್ವ ವೈದಿಕ ಸನಾತನ ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಾದಿ ಕಿರಣ್ ಸಿಂಗ್ ವಾರಾಣಾಸಿಯ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, "ಗ್ಯಾನ್ ವಾಪಿ ಸಂಕೀರ್ಣಕ್ಕೆ ಮುಸ್ಲಿಮರ ಪ್ರವೇಶವನ್ನು ನಿರ್ಬಂಧಿಸಿ ಆ ಪ್ರದೇಶವನ್ನು ಸನಾತನ ಸಂಘಕ್ಕೆ ಹಸ್ತಾಂತರಿಸಿ ಅಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸುವುದಕ್ಕೆ ಅನುಮತಿ ನೀಡಬೇಕು" ಎಂದು ಮನವಿ ಮಾಡಿದ್ದರು. ಮೇ.25 ರಂದು ಜಿಲ್ಲಾ ನ್ಯಾಯಾಧೀಶರಾದ ಎ.ಕೆ ವಿಶ್ವೇಶ್ ಅವರು ಫಾಸ್ಟ್ ಟ್ರ್ಯಾಕ್ ಕೋರ್ಟ್ ಗೆ ಪ್ರಕರಣವನ್ನು ವರ್ಗಾಯಿಸಿದ್ದರು.
ಇದನ್ನೂ ಓದಿ: ಮುಂದಿನ ಆದೇಶದವರೆಗೆ ಜ್ಞಾನವಾಪಿ ಮಸೀದಿ 'ಶಿವಲಿಂಗ ಪ್ರದೇಶ'ದ ರಕ್ಷಣೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ
ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್, ಪೊಲೀಸ್ ಆಯುಕ್ತರು, ಗ್ಯಾನ್ ವಾಪಿ ಮಸೀದಿಯ ವ್ಯವಹಾರಗಳನ್ನು ನೋಡಿಕೊಳ್ಳುವ ಅಂಜುಮನ್ ಇಂತಾಜ್ಮಿಯಾ ಸಮಿತಿ, ವಿಶ್ವನಾಥ ದೇವಾಲಯ ಟ್ರಸ್ಟ್ ನ್ನು ಪ್ರಕರಣದಲ್ಲಿ ರೆಸ್ಪಾಂಡೆಂಟ್ ಆಗಿಸಲಾಗಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.