ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್: ನದಿಗೆ ಬಿದ್ದ ಮಹಿಳೆ ರಕ್ಷಿಸಲು ಹೋದ ಒಂದೇ ಕುಟುಂಬದ ಐವರು ನೀರುಪಾಲು

ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಒಂದೇ ಕುಟುಂಬದ ಐವರು ಕಚ್‌ನ ನರ್ಮದಾ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಕಚ್: ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಒಂದೇ ಕುಟುಂಬದ ಐವರು ಕಚ್‌ನ ನರ್ಮದಾ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮೃತರು ಒಂದೇ ಕುಟುಂಬದವರು ಎನ್ನಲಾಗಿದೆ. ಪ್ರಾಗ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಂಡ್ಲಾ ಗ್ರಾಮದ ಬಳಿ ಸೋಮವಾರ ಸಂಜೆ 7 ಗಂಟೆಗೆ ಈ ಘಟನೆ ನಡೆದಿದೆ ಎಂದು ಕಚ್ ಪಶ್ಚಿಮ ಎಸ್‌ಪಿ ಸೌರಭ್ ಸಿಂಗ್ ತಿಳಿಸಿದ್ದಾರೆ.

ನೀರು ತರಲು ಮಹಿಳೆ ಹೋಗಿದ್ದ ವೇಳೆ  ಕಾಲು ಜಾರಿ ಬಿದ್ದಿದ್ದಾಳೆ, ಆಕೆಯನ್ನು ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗುತ್ತಿರುವುದನ್ನು ನೋಡಿದ ಇತರ ನಾಲ್ವರು ಆಕೆಯನ್ನು ರಕ್ಷಿಸಲು ನೀರಿಗೆ ಜಿಗಿದಿದ್ದಾರೆ, ದುರದೃಷ್ಟವಶಾತ್ ಯಾರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮತ್ತು ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಕತ್ತಲೆಯಾಗಿದ್ದ ಕಾರಣ ಕಾರ್ಯಾಚರಣೆಗೆ ಸಾಕಷ್ಟು ತೊಂದರೆಯಾಗಿತ್ತು. ಆದರೆ, ಹಲವು ಗಂಟೆಗಳ ಪ್ರಯತ್ನದ ಬಳಿಕ ಎಲ್ಲರ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ವೈಮಾನಿಕ ದಾಳಿಗೆ ತತ್ತರಿಸಿದ ಲೆಬನಾನ್: 16 ಮಂದಿ ಬಲಿ; ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

NEET ಭದ್ರತೆಗೆ ಆದ್ಯತೆ; ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ, ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!

ಪಶ್ಚಿಮ ಬಂಗಾಳದಲ್ಲಿ ತೃಣಮೂಲಕ್ಕೆ ಕುಸಿದ ಮಮತಾ (ನೇರ ನೋಟ)

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್‌ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ