ದೇಶ

ಮೈನ್‌ಪುರಿ ಲೋಕಸಭೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಕಾಂಗ್ರೆಸ್, ಡಿಂಪಲ್ ಯಾದವ್ ಗೆ ಬೆಂಬಲ

Lingaraj Badiger

ಮೈನ್‌ಪುರಿ: ಮುಂಬರುವ ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕಣದಿಂದ ಕಾಂಗ್ರೆಸ್ ಹಿಂದೆ ಸರಿದಿದ್ದು, ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದೆ.

ಸಮಾಜವಾದಿ ಪಕ್ಷದ ಭದ್ರಕೋಟೆ ಎಂದು ಪರಿಗಣಿಸಲಾದ ಮೈನ್‌ಪುರಿ ಕ್ಷೇತ್ರದ ಸಂಸದರಾಗಿದ್ದ  ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಪ್ರಮುಖವಾಗಿ, ಎಸ್‌ಪಿ ಅಭ್ಯರ್ಥಿಯಾಗಿ ಡಿಂಪಲ್ ಯಾದವ್ ಅವರು ಮೈನ್‌ಪುರಿ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಮೂಲಗಳ ಪ್ರಕಾರ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರಿಗೆ ಗೌರವ ಸಲ್ಲಿಸಲು ಕಾಂಗ್ರೆಸ್ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎನ್ನಲಾಗಿದೆ.

ಭವಿಷ್ಯದಲ್ಲಿ ಎಸ್‌ಪಿಯೊಂದಿಗೆ ಉತ್ತಮ ಬಾಂಧವ್ಯ ಹೊಂದಲು, ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಅವರು ಹೈಕಮಾಂಡ್ ಮತ್ತು ರಾಜ್ಯ ಘಟಕದ ನಾಯಕರೊಂದಿಗೆ ಚರ್ಚಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT