ರಾಹುಲ್, ಖರ್ಗೆ, ಸೋನಿಯಾ ಗಾಂಧಿ 
ದೇಶ

ಗುಜರಾತ್  ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತರೂರ್ ಗೆ ಇಲ್ಲ ಸ್ಥಾನ

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ಭೂಪೇಶ್ ಬಾಘೇಲ್, ಶಾಸಕ ಸಚಿನ್ ಪೈಲಟ್, ಜಿಗ್ನೇಶ್ ಮೆವಾನಿ, ಕನ್ಹಯ್ಯಾ ಕುಮಾರ್ ಮತ್ತಿತರ 40 ಮಂದಿ ಸ್ಟಾರ್ ಪ್ರಚಾರಕರಾಗಿದ್ದಾರೆ.  

ಈ ಪಟ್ಟಿಯಲ್ಲಿ ಕರ್ನಾಟಕದಿಂದ  ಬಿ.ಕೆ. ಹರಿಪ್ರಸಾದ್ ಅವರಿಗೂ ಸ್ಥಾನ ನೀಡಲಾಗಿದೆ. ಆದರೆ, ಇತ್ತೀಚಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಶಶಿ ತರೂರ್ ಅವರಿಗೆ ಸ್ಥಾನ ನೀಡಿಲ್ಲ. ಅಲ್ಲದೇ, ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೊರತುಪಡಿಸಿದರೆ ನಂತರದ ಮೂರು ಸ್ಥಾನಗಳಲ್ಲಿ ಗಾಂಧಿ ಕುಟುಂಬದವರೇ ಇರುವುದಕ್ಕೆ ಕೆಲವರು ನಾನಾ ರೀತಿಯಲ್ಲಿ ಟೀಕಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT