ದೇಶ

ಬಿಜೆಪಿಗೆ ಬಹುಮತ ಬಂದರೆ...: ಗುಜರಾತ್‌ಗೆ ಮುಖ್ಯಮಂತ್ರಿ ಯಾರಾಗಬಹುದೆಂದು ಬಹಿರಂಗಪಡಿಸಿದ ಅಮಿತ್ ಶಾ!

Vishwanath S

ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿದ್ದು ಇದರ ನಡುವೆ ಮುಂದಿನ ಗುಜರಾತ್ ಮುಖ್ಯಮಂತ್ರಿ ಹೆಸರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಹಿರಂಗಪಡಿಸಿದ್ದಾರೆ.

ಹಾಲಿ ಸಿಎಂ ಭೂಪೇಂದ್ರ ಪಟೇಲ್ ಅವರೇ ಗುಜರಾತ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ತವರು ರಾಜ್ಯ ಗುಜರಾತ್ ನಲ್ಲಿ ಈ ಬಾರಿಯೂ ಬಿಜೆಪಿಗೆ ಬಹುಮತ ಬಂದರೆ ಅದು ಸತತ ಏಳನೇ ಬಾರಿಗೆ ಸರ್ಕಾರ ರಚಿಸಿದ ಖ್ಯಾತಿಗೆ ಭಾಜನವಾಗಲಿದೆ.
ಹೇಳಿದ್ದಾರೆ.

2021ರ ಸೆಪ್ಟೆಂಬರ್ ನಲ್ಲಿ ವಿಜಯ್ ರೂಪಾನಿ ಬದಲಿಗೆ ಭೂಪೇಂದ್ರ ಪಟೇಲ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಇದು ಅನೇಕರನ್ನು ಆಶ್ಚರ್ಯಗೊಳಿಸಿತು. ಭೂಪೇಂದ್ರ ಪಟೇಲ್ ಘಟ್ಲೋಡಿಯಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿದ್ದರು. ಈಗ ಅದೇ ಕ್ಷೇತ್ರದಿಂದ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.

ಈ ಹಿಂದೆ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು 'ಸಾರ್ವಜನಿಕ ಸಮೀಕ್ಷೆ' ನಡೆಸಿ ನಂತರ ಪಕ್ಷದ ನಾಯಕ ಇಸುದನ್ ಗಧ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿತ್ತು. ಇನ್ನು ಚುನಾವಣೆಗೆ ಮುಖ್ಯಮಂತ್ರಿ ಆಯ್ಕೆಯನ್ನು ಘೋಷಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

ಗುಜರಾತ್‌ನ ಒಟ್ಟು 182 ಸ್ಥಾನಗಳಿಗೆ ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

2017ರ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಸಂಖ್ಯೆಯು 99ಕ್ಕೆ ಎರಡಂಕಿಗೆ ಇಳಿದಿತ್ತು. ಇನ್ನು ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಕಾರ್ಯಕ್ಷಮತೆಯನ್ನು ಸುಧಾರಿಸಿತ್ತು.

ತನ್ನ ಆಕ್ರಮಣಕಾರಿ ಪ್ರಚಾರದೊಂದಿಗೆ AAP ತನ್ನನ್ನು ಬಿಜೆಪಿಗೆ ಪ್ರಮುಖ ಸವಾಲಾಗಿ ಬಿಂಬಿಸುತ್ತಿದೆ. ಈ ಹಿಂದೆ ಅಲ್ಲಿ ಚುನಾವಣೆಗಳು ಸಾಮಾನ್ಯವಾಗಿ ಕೇಸರಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಏಕಪಕ್ಷೀಯ ಸ್ಪರ್ಧೆಯಾಗಿತ್ತು. 

SCROLL FOR NEXT