ಸಾಂದರ್ಭಿಕ ಚಿತ್ರ 
ದೇಶ

ರೈಲು ಸೇವೆಗೆ ಅಡ್ಡಿ ಪ್ರಕರಣ: ಉತ್ತರ ಪ್ರದೇಶ ಸಚಿವ ಕಪಿಲ್ ದೇವ್ ಅಗರ್ವಾಲ್ ಖುಲಾಸೆ

2012ರಲ್ಲಿ ಪ್ರತಿಭಟನೆಯ ವೇಳೆ ರೈಲು ಸೇವೆಗೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಉತ್ತರ ಪ್ರದೇಶ ಸಚಿವ ಕಪಿಲ್ ದೇವ್ ಅಗರ್ವಾಲ್ ಮತ್ತು ಇತರ ಏಳು ಬಿಜೆಪಿ ನಾಯಕರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ....

ಮುಜಾಫರ್‌ನಗರ: 2012ರಲ್ಲಿ ಪ್ರತಿಭಟನೆಯ ವೇಳೆ ರೈಲು ಸೇವೆಗೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಉತ್ತರ ಪ್ರದೇಶ ಸಚಿವ ಕಪಿಲ್ ದೇವ್ ಅಗರ್ವಾಲ್ ಮತ್ತು ಇತರ ಏಳು ಬಿಜೆಪಿ ನಾಯಕರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ.

ಅಗರ್ವಾಲ್ ಮತ್ತು ಇತರ ಆರೋಪಿಗಳಾದ, ಮಾಜಿ ಶಾಸಕರಾದ ಅಶೋಕ್ ಕನ್ಸಾಲ್ ಮತ್ತು ಉಮೇಶ್ ಮಲಿಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ವಿಜಯ್ ಶುಕ್ಲಾ, ಮಾಜಿ ಜಿಲ್ಲಾಧ್ಯಕ್ಷ ಪವನ್ ಟ್ರಾರ್ ಮತ್ತು ಯಶಪಾಲ್ ಪವಾರ್; ವಭವ್ ತ್ಯಾಗಿ ಮತ್ತು ಸುನಿಲ್ ತಾಯಲ್ ಅವರನ್ನು ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ.

ವಿಶೇಷ ನ್ಯಾಯಾಧೀಶ ಮಯಾಂಕ್ ಅಗರ್ವಾಲ್ ಅವರು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ.

ಪ್ರಾಸಿಕ್ಯೂಷನ್ ಅಧಿಕಾರಿ ನೀರಜ್ ಸಿಂಗ್ ಅವರ ಪ್ರಕಾರ, ಸೆಪ್ಟೆಂಬರ್ 3, 2012 ರಂದು ಮುಜಾಫರ್‌ನಗರ ರೈಲು ನಿಲ್ದಾಣದಲ್ಲಿ ರೈಲು ಸಂಚಾರಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಅಗರ್ವಾಲ್ ಸೇರಿದಂತೆ 12 ಜನರ ವಿರುದ್ಧ ಪೊಲೀಸರು ರೈಲ್ವೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಈ ಆರೋಪಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!