ಅಜಂ ಖಾನ್ 
ದೇಶ

45 ವರ್ಷಗಳಲ್ಲೇ ಮೊದಲ ಬಾರಿಗೆ ರಾಮ್‌ಪುರ ಚುನಾವಣಾ ಕಣದಿಂದ ಹೊರಗುಳಿದ ಅಜಮ್ ಖಾನ್ ಕುಟುಂಬ

1977 ರ ನಂತರ ಇದೇ ಮೊದಲ ಬಾರಿಗೆ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅಥವಾ ಅವರ ಕುಟುಂಬ ಸದಸ್ಯರು ರಾಮ್‌ಪುರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.

ರಾಮ್‌ಪುರ: 1977 ರ ನಂತರ ಇದೇ ಮೊದಲ ಬಾರಿಗೆ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅಥವಾ ಅವರ ಕುಟುಂಬ ಸದಸ್ಯರು ರಾಮ್‌ಪುರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.

ದ್ವೇಷ ಭಾಷಣ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಅಜಂ ಖಾನ್ ಅವರನ್ನು ಶಾಸಕ ಸ್ಥಾನದಿಂದ  ಅನರ್ಹಗೊಳಿಸಿದ ನಂತರ ತೆರವಾದ ಸ್ಥಾನಕ್ಕೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದೆ.

ಸಮಾಜವಾದಿ ಪಕ್ಷ ಈ ಬಾರಿ, ಅಜಂ ಖಾನ್ ಅವರ ಪತ್ನಿ ತಜೀನ್ ಫಾತ್ಮಾ ಅಥವಾ ಅವರ ಸೊಸೆಯನ್ನು ಕಣಕ್ಕಿಳಿಸಿಲ್ಲ. ಬದಲಾಗಿ ಅಜಂ ಖಾನ್ ಅವರ ನಿಷ್ಠಾವಂತ ಅಸೀಮ್ ರಾಜಾಗೆ ಟಿಕೆಟ್ ನೀಡಲಾಗಿದೆ. ಅಜಂ ಖಾನ್ ಅಥವಾ ಅವರ ಕುಟುಂಬದ ಸದಸ್ಯರು 1977 ರಿಂದ ನಿರಂತರವಾಗಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಖಾನ್ ಅವರು 1977 ರಿಂದ 2022 ರವರೆಗೆ 12 ಬಾರಿ ವಿಧಾನಸಭಾ ಚುನಾವಣೆಗಳಿಗೆ ಸ್ಪರ್ಧಿಸಿದ್ದಾರೆ. ಅದರಲ್ಲಿ ಅವರು ಹತ್ತು ಬಾರಿ ಗೆದ್ದಿದ್ದಾರೆ ಮತ್ತು ಎರಡು ಬಾರಿ ಸೋತಿದ್ದಾರೆ.

2019ರಲ್ಲಿ ಅಜಂ ಖಾನ್ ಸಂಸತ್ ಸದಸ್ಯರಾದ ನಂತರ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿ ತಜೀನ್ ಫಾತ್ಮಾ ಸ್ಪರ್ಧಿಸಿ ಗೆದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?