ಸಾಂದರ್ಭಿಕ ಚಿತ್ರ 
ದೇಶ

ಕಪ್ಪುಹಣ, ಉಗ್ರರಿಗೆ ಆರ್ಥಿಕ ನೆರವು ತಡೆಯಲು ನೋಟ್ ಬ್ಯಾನ್: ಸುಪ್ರೀಂಗೆ ಕೇಂದ್ರದ ಅಫಿಡವಿಟ್

2016ರ ನೋಟು ಅಮಾನ್ಯೀಕರಣವು ಒಂದು "ಉತ್ತಮ" ನಿರ್ಧಾರವಾಗಿದೆ ಮತ್ತು ನಕಲಿ ಹಣ, ಭಯೋತ್ಪಾದಕರಿಗೆ ಹಣಕಾಸು ನೆರವು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ...

ನವದೆಹಲಿ: 2016ರ ನೋಟು ಅಮಾನ್ಯೀಕರಣವು ಒಂದು "ಉತ್ತಮ" ನಿರ್ಧಾರವಾಗಿದೆ ಮತ್ತು ನಕಲಿ ಹಣ, ಭಯೋತ್ಪಾದಕರಿಗೆ ಹಣಕಾಸು ನೆರವು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

500 ಮತ್ತು 1000 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿದ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್ ಬ್ಯಾಂಕ್‌ನೊಂದಿಗೆ ವ್ಯಾಪಕವಾದ ಸಮಾಲೋಚನೆಯ ನಂತರ ಮತ್ತು ನೋಟು ನಿಷೇಧವನ್ನು ಜಾರಿಗೊಳಿಸುವ ಮೊದಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

2016 ರ ನೋಟು ಅಮಾನ್ಯೀಕರಣದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಹಲವು ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಇಂದು ಅಫಿಡವಿಟ್‌ ಸಲ್ಲಿಸಿದೆ.

ನ್ಯಾಯಮೂರ್ತಿಗಳಾದ ಎಸ್‌ಎ ನಜೀರ್, ಬಿಆರ್ ಗವಾಯಿ, ಎಎಸ್ ಬೋಪಣ್ಣ, ವಿ ರಾಮಸುಬ್ರಮಣಿಯನ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ನವೆಂಬರ್ 24 ರಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT