ಆಟೋದಿಂದ ಕೆಳಕ್ಕೆ ಜಿಗಿದ ಬಾಲಕಿ 
ದೇಶ

ಲೈಂಗಿಕ ಕಿರುಕುಳ ನೀಡುತ್ತಿದ್ದ ಚಾಲಕನಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ಆಟೋದಿಂದ ಜಂಪ್ ಮಾಡಿದ ಬಾಲಕಿ, ವಿಡಿಯೋ ವೈರಲ್

ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ವೇಗವಾಗಿ ಚಲಿಸುತ್ತಿದ್ದ ಆಟೋದಿಂದ 17 ವರ್ಷದ ಬಾಲಕಿ ಜಿಗಿದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮುಂಬೈ: ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ವೇಗವಾಗಿ ಚಲಿಸುತ್ತಿದ್ದ ಆಟೋದಿಂದ 17 ವರ್ಷದ ಬಾಲಕಿ ಜಿಗಿದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ (Maharashtra) ಔರಂಗಾಬಾದ್‌ನಲ್ಲಿ (Aurangabad)ಈ ಘಟನೆ ನಡೆದಿದ್ದು, ಮುಂಬೈ ನಿವಾಸಿ ಸೈಯದ್ ಅಕ್ಬರ್ ಹಮೀದ್ ಎಂಬಾತ ಬಾಲಕಿಯನ್ನು ಆಟೋದಲ್ಲಿ ಕೂರಿಸಿಕೊಂಡು ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಆತನಿಂದ ತಪ್ಪಿಸಿಕೊಳ್ಳಲು ಬಾಲಕಿ ವೇಗವಾಗಿ ಚಲಿಸುತ್ತಿದ್ದ ಆಟೋದಿಂದಲೇ ಕೆಳಕ್ಕೆ ಜಿಗಿದಿದ್ದಾಳೆ. ಈ ವೇಳೆ ಆಕೆಯ  ತಲೆಗೆ ಗಂಭೀರವಾಗಿ ಗಾಯವಾಗಿದೆ ಎಂದು ಹೇಳಲಾಗಿದೆ.

ಭಾನುವಾರ ಈ ಘಟನೆ ನಡೆದಿದ್ದು, ಆರೋಪಿಯನ್ನು ಮುಂಬೈ ನಿವಾಸಿ ಸೈಯದ್ ಅಕ್ಬರ್ ಹಮೀದ್ ಎಂದು ಗುರುತಿಸಲಾಗಿದೆ. ನಾಲ್ಕೈದು ತಿಂಗಳ ಹಿಂದೆ ಔರಂಗಾಬಾದ್‍ಗೆ ತೆರಳಿ ಬಾಡಿಗೆ ಆಟೋರಿಕ್ಷಾ ಓಡಿಸುತ್ತಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಬಾಲಕಿ ಆಟೋರಿಕ್ಷಾದಿಂದ ಜಿಗಿದ ಘಟನೆಯ ವೀಡಿಯೋ ಸೆರೆಯಾಗಿದೆ. ಅದೃಷ್ಟವಶಾತ್ ಬಾಲಕಿ ಜಿಗಿದ ವೇಳೆ ಕಾರೊಂದು ಪಕ್ಕದಲ್ಲಿಯೇ ಚಲಿಸಿದ್ದು, ಸಂಭವಿಸಬಹುದಾದ ಪ್ರಾಣಾಪಾಯದಿಂದ ಆಕೆ ಬಚಾವ್ ಆಗಿದ್ದಾಳೆ. ವೀಡಿಯೋದಲ್ಲಿ ಕೆಳಗೆ ಬಿದ್ದ ಬಾಲಕಿಗೆ ಪಾದಚಾರಿಗಳು ಸಹಾಯ ಮಾಡಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಬಾಲಕಿ ತನ್ನ ಟ್ಯೂಷನ್‍ಗೆ ತೆರಳಲು ಆಟೋ ಹತ್ತಿದ್ದಾಳೆ. ಈ ವೇಳೆ ಆರೋಪಿ ಆಟೋ ಚಾಲಕ ಸೈಯದ್ ಅಕ್ಬರ್ ಹಮೀದ್ ಸಾಮಾನ್ಯವಾಗಿ ಪ್ರಶ್ನೆಗಳನ್ನು ಕೇಳುವ ಮೂಲಕ ಮಾತನಾಡಲು ಆರಂಭಿಸಿದ್ದಾನೆ. ನಂತರ ಕ್ರಮೇಣ ಬಾಲಕಿಗೆ ಬೆದರಿಕೆಯೊಡ್ಡಿ ಅಶ್ಲೀಲ ಟೀಕೆಗಳನ್ನು ಮಾಡಿದ್ದಾನೆ. ಬಳಿಕ ಆಟೋವನ್ನು ವೇಗವಾಗಿ ಚಲಾಯಿಸಲು ಆರಂಭಿಸಿದಾಗ ಬಾಲಕಿ ರಿಕ್ಷಾದಿಂದ ಏಕಾಏಕಿ ಜಿಗಿದಿದ್ದಾಳೆ.

ಸದ್ಯ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ರಸ್ತೆಯಲ್ಲಿದ್ದ 40 ಸಿಸಿಟಿವಿ ಕ್ಯಾಮೆರಾಗಳ ಸಹಾಯದಿಂದ ಆಟೋ ಚಾಲಕನ ಸ್ಥಳವನ್ನು ಪತ್ತೆ ಹಚ್ಚಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel