ರೈಲ್ವೆ ಹಳಿ ಸ್ಫೋಟ 
ದೇಶ

ಉದಯಪುರದಲ್ಲಿ ರೈಲ್ವೆ ಹಳಿ ಸ್ಫೋಟ ಪ್ರಕರಣ: ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ

ರಾಜಸ್ಥಾನದ ಉದಯ್‌ಪುರ-ಅಹಮದಾಬಾದ್‌ ರೈಲು ಹಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

ಉದಯಪುರ: ರಾಜಸ್ಥಾನದ ಉದಯ್‌ಪುರ-ಅಹಮದಾಬಾದ್‌ ರೈಲು ಹಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

ಭಾರತೀಯ ರೈಲ್ವೆ ಮತ್ತು ಹಿಂದೂಸ್ತಾನ್ ಜಿಂಕ್ ಲಿಮಿಟೆಡ್‌ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡ ನಂತರ ಅವರಿಗೆ ಪರಿಹಾರ ಅಥವಾ ಉದ್ಯೋಗ ನೀಡದ ಕಾರಣ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

"ಬಾಲಾಪರಾಧಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಸ್ಫೋಟಕವನ್ನು ಖರೀದಿಸಿದ ಇನ್ನೊಬ್ಬ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ" ಎಂದು ಭಯೋತ್ಪಾದನಾ ನಿಗ್ರಹ ದಳ ಮತ್ತು ವಿಶೇಷ ಕಾರ್ಯಾಚರಣೆ ತಂಡದ ಎಡಿಜಿ ಅಶೋಕ್ ರಾಥೋಡ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆರೋಪಿಗಳನ್ನು ಧೂಲ್ ಚಂದ್ ಮೀನಾ ಮತ್ತು ಪ್ರಕಾಶ್ ಮೀನಾ ಎಂದು ಗುರುತಿಸಲಾಗಿದೆ. ಅಪ್ರಾಪ್ತನಿಗೆ 17 ವರ್ಷ ಎಂದು ಅವರು ಹೇಳಿದ್ದಾರೆ.

ಕಳೆದ ಭಾನುವಾರ ಅಸರ್ವಾ-ಉದಯಪುರ್ ಎಕ್ಸ್‌ಪ್ರೆಸ್ ರೈಲು ಹಾದುಹೋಗುವ ಕೆಲವೇ ಗಂಟೆಗಳ ಮೊದಲು ಹಳಿ ಸ್ಫೋಟಗೊಂಡಿದ್ದು, ರೈಲನ್ನು ಡುಂಗರ್ ಪುರದಲ್ಲಿ ತಡೆದು ನಿಲ್ಲಿಸಲಾಗಿದೆ. ಇದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

Flydubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್, 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!