ಆನಂದ್ ತೇಲ್ತುಂಬೆ 
ದೇಶ

ಭೀಮಾ ಕೋರೆಗಾಂವ್ ಪ್ರಕರಣ: ದಲಿತ ಚಿಂತಕ ಆನಂದ್ ತೇಲ್ತುಂಬೆಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷದ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಸಂಪರ್ಕ ಆರೋಪ ಎದುರಿಸುತ್ತಿರುವ ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ದಲಿತ ಚಿಂತಕ ಆನಂದ್‌ ತೆಲ್ತುಂಬೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷದ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಸಂಪರ್ಕ ಆರೋಪ ಎದುರಿಸುತ್ತಿರುವ ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ದಲಿತ ಚಿಂತಕ ಆನಂದ್‌ ತೇಲ್ತುಂಬೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ವಿಶೇಷ ಎನ್‌ಐಎ ನ್ಯಾಯಾಲಯ ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರ ವಿರುದ್ಧ ಆನಂದ್‌ ತೇಲ್ತುಂಬೆ ಕಳೆದ ವರ್ಷ ಹೈಕೋರ್ಟ್‌ ಮೊರೆ ಹೋಗಿದ್ದರು.

ಈ ಪ್ರಕರಣವು 2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗಾರ್ ಪರಿಷದ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದೆ. ಇದು ಮರುದಿನ ನಗರದ ಹೊರವಲಯದಲ್ಲಿರುವ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂಸಾಚಾರದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವು ಗಾಯಗೊಂಡಿದ್ದಾರೆ. ಹನ್ನೆರಡಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಶಿಕ್ಷಣತಜ್ಞರನ್ನು ಆರೋಪಿಗಳೆಂದು ಹೆಸರಿಸಲಾಗಿರುವ ಈ ಪ್ರಕರಣವನ್ನು ಸದ್ಯ ಎನ್‌ಐಎ ತನಿಖೆ ನಡೆಸುತ್ತಿದ್ದು, ಇದಕ್ಕೂ ಮುನ್ನ ಪುಣೆ ಪೊಲೀಸರು ತನಿಖೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT