ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಫಾರೂಖ್ ಅಬ್ದುಲ್ಲಾ ರಾಜೀನಾಮೆ!

ಜಮ್ಮು ಮತ್ತುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಶುಕ್ರವಾರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಹೊಸ ಪೀಳಿಗೆಯವರು ಅಧ್ಯಕ್ಷ ಸ್ಥಾನ ವಹಿಸಲು ಇದು ಸೂಕ್ತ ಸಮಯವಾಗಿದೆ ಎಂದು ಅವರು ಹೇಳಿದ್ದಾರೆ.

ಫಾರೂಖ್ ಅಬ್ದುಲ್ಲಾ
Nagaraja AB
Updated On : 18 Nov 2022, 1:51 pm

ಶ್ರೀನಗರ: ಜಮ್ಮು ಮತ್ತುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಶುಕ್ರವಾರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಹೊಸ ಪೀಳಿಗೆಯವರು ಅಧ್ಯಕ್ಷ ಸ್ಥಾನ ವಹಿಸಲು ಇದು ಸೂಕ್ತ ಸಮಯವಾಗಿದೆ ಎಂದು ಅವರು ಹೇಳಿದ್ದಾರೆ. 
 
ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್ 5 ರಂದು ಚುನಾವಣೆ ನಡೆಯಲಿದ್ದು, ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಯುವ ಪೀಳಿಗೆಯವರು ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಲು ಇದು ಸರಿಯಾದ ಸಮಯವಾಗಿದೆ ಎಂದು ಕಣಿವೆ ರಾಜ್ಯದ ಹಿರಿಯ ರಾಜಕಾರಣಿ ಫಾರೂಖ್ ಅಬ್ದುಲ್ಲಾ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. 

ಇದನ್ನೂ ಓದಿ: ನ್ಯಾಯ ಸಿಗದ ಹೊರತು ಕಾಶ್ಮೀರದಲ್ಲಿ ಹತ್ಯೆಗಳು ನಿಲ್ಲುವುದಿಲ್ಲ: ಫಾರೂಖ್ ಅಬ್ದುಲ್ಲಾ

ಪಕ್ಷದ ಅತ್ಯುನ್ನತ ಸ್ಥಾನಕ್ಕೆ ಪಕ್ಷದಿಂದ ಯಾರೇ ಬೇಕಾದರೂ ಸ್ಪರ್ಧಿಸಬಹುದಾಗಿದೆ. ಇದು ಪ್ರಜಾಸತಾತ್ಮಕ ಪ್ರಕ್ರಿಯೆಯಾಗಿದೆ ಎಂದು ಅವರು ತಿಳಿಸಿದ್ದಾರೆ. 85 ವರ್ಷದ ಅಬ್ದುಲ್ಲಾ, ಪಕ್ಷದ ವರಿಷ್ಠರ ಸ್ಥಾನ ವಹಿಸಲಿದ್ದು, ಪ್ರಸ್ತುತ ಉಪಾಧ್ಯಕ್ಷರಾಗಿರುವ ಅವರ ಮಗ ಒಮರ್ ಅಬ್ದಲ್ಲಾ, ಪಕ್ಷದ ನೂತನ ಅಧ್ಯಕ್ಷರಾಗುವ ಸಾಧ್ಯತೆಯಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments