ಕೇಂದ್ರ ಚುನಾವಣಾ ಆಯೋಗದ ಕಚೇರಿ 
ದೇಶ

ಪ್ರಚಾರದ ಗೀಳು: ಗುಜರಾತ್ ಚುನಾವಣೆಯ ಸಾಮಾನ್ಯ ವೀಕ್ಷಕನನ್ನು ವಜಾಗೊಳಿಸಿದ ಚುನಾವಣಾ ಆಯೋಗ

ಅಹಮದಾಬಾದ್ ನ ಬಾಪುನಗರ ಮತ್ತು ಅಸರ್ವಾ ಎರಡು ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರು ಇತ್ತೀಚೆಗೆ ತಮ್ಮ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ...

ಗಾಂಧಿನಗರ: ಅಹಮದಾಬಾದ್ ನ ಬಾಪುನಗರ ಮತ್ತು ಅಸರ್ವಾ ಎರಡು ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರು ಇತ್ತೀಚೆಗೆ ತಮ್ಮ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಅವರನ್ನು ಚುನಾವಣಾ ಕರ್ತವ್ಯದಿಂದ ತೆಗೆದುಹಾಕಿದೆ. 

ಸಿಂಗ್ ಅವರ ಬದಲಿಗೆ ಸಾಮಾನ್ಯ ವೀಕ್ಷಕರನ್ನು ನೇಮಿಸುವವರೆಗೆ ಈ ಎರಡು ಕ್ಷೇತ್ರಗಳ ಉಸ್ತುವಾರಿಯನ್ನು ಐಎಎಸ್ ಅಧಿಕಾರಿ ಕ್ರಿಶನ್ ಬಾಜ್‌ಪೇಯ್ ಅವರಿಗೆ ನೀಡಲಾಗಿದೆ. ಕ್ರಿಶನ್ ಅವರು ಇತರ ಹತ್ತಿರದ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿದ್ದಾರೆ.

"ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಕ್ಕಾಗಿ ಅಭಿಷೇಕ್ ಸಿಂಗ್ ಅವರನ್ನು ತೆಗೆದುಹಾಕಲಾಗಿದೆ ಮತ್ತು ಸಾಮಾನ್ಯ ವೀಕ್ಷಕರನ್ನು ನೇಮಿಸುವವರೆಗೆ ಕ್ರಿಶನ್ ಬಾಜ್‌ಪೇಯ್ ಅವರಿಗೆ ಉಸ್ತುವಾರಿ ನೀಡಲಾಗಿದೆ" ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ಅಜಯ್ ಭಟ್ ಅವರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ, ಸಿಂಗ್ ಅವರು ಅಧಿಕೃತ ವಾಹನದ ಪಕ್ಕದಲ್ಲಿ ನಿಂತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ವಾಹನದ ಮುಂಭಾಗದಲ್ಲಿ "ಭಾರತೀಯ ಚುನಾವಣಾ ಆಯೋಗದ ವೀಕ್ಷಕ" ಎಂದು ಬರೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್