ಪ್ರಾತಿನಿಧಿಕ ಚಿತ್ರ 
ದೇಶ

ಕೇರಳ: ಕಾರಿನೊಳಗೆ ಮಾಡೆಲ್ ಮೇಲೆ ಗ್ಯಾಂಗ್ ರೇಪ್, ಮಾನವ ಕಳ್ಳಸಾಗಣೆಯ ಶಂಕೆ ವ್ಯಕ್ತಪಡಿಸಿದ ಪೊಲೀಸ್ ಆಯುಕ್ತರು

ಚಲಿಸುತ್ತಿದ್ದ ಕಾರಿನೊಳಗೆ 19 ವರ್ಷದ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶನಿವಾರ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಚ್ಚಿ: ಚಲಿಸುತ್ತಿದ್ದ ಕಾರಿನೊಳಗೆ 19 ವರ್ಷದ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶನಿವಾರ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಡಂಗಲ್ಲೂರು ಮೂಲದ ಮೂವರು ವ್ಯಕ್ತಿಗಳು ಗುರುವಾರ ರಾತ್ರಿ ತಮ್ಮ ಚಲಿಸುತ್ತಿದ್ದ ವಾಹನದಲ್ಲಿ ಕಾಸರಗೋಡು ಮೂಲದ ರೂಪದರ್ಶಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸಿ.ಎಚ್. ನಾಗರಾಜು ತಿಳಿಸಿದ್ದಾರೆ.

ಸಂತ್ರಸ್ತೆಗೆ ಪರಿಚಯವಿರುವ ಆರೋಪಿ ಮಹಿಳೆ ರಾಜಸ್ಥಾನ ಮೂಲದವಳು ಮತ್ತು ಆಕೆ ಕೂಡ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದಾಳೆ. ನಾಲ್ವರು ಆರೋಪಿಗಳ ಹಿನ್ನೆಲೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತರು, ಘಟನೆಯಲ್ಲಿ ಮಾನವ ಕಳ್ಳಸಾಗಣೆಯ ಅಂಶವೂ ಇದೆ. ಈ ಉದ್ದೇಶಕ್ಕಾಗಿ ಒಬ್ಬ ವ್ಯಕ್ತಿಯನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಮಾನವ ಕಳ್ಳಸಾಗಣೆ ವಿರೋಧಿ ಒಳಗೊಂಡಿರುವ ಸೆಕ್ಷನ್ 370 ಅನ್ನು ಸಹ ಸೇರಿಸಲಾಗಿದೆ' ಎಂದು ತಿಳಿಸಿದ್ದಾರೆ.

ನಗರದ ಕಾಕ್ಕನಾಡ್‌ನಲ್ಲಿ ವಾಸವಿದ್ದ ಸಂತ್ರಸ್ತೆಯನ್ನು ಆಕೆಯ ಸ್ನೇಹಿತೆ ರಾಜಸ್ಥಾನಿ ಮಹಿಳೆ ಡಿಜೆ ಪಾರ್ಟಿಗೆ ಆಹ್ವಾನಿಸಿದ್ದಳು ಮತ್ತು ಪುರುಷರಿಗೆ ಪರಿಚಯ ಮಾಡಿಸಿದ್ದಳು ಎಂದು ಶುಕ್ರವಾರ ರಾತ್ರಿ ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಂಡ ನಂತರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT