ಗೌತಮ್ ನವ್ಲಾಖಾ 
ದೇಶ

ಜೈಲಿನಿಂದ ಹೊರಬಂದ ಗೌತಮ್ ನವ್ಲಾಖಾ: ನವಿ ಮುಂಬೈನ ಸಿಪಿಐ ಕಚೇರಿಯಲ್ಲಿ ಗೃಹಬಂಧನ!

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿ ಗೌತಮ್ ನವ್ಲಾಖಾ ತಲೋಜಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವೈದ್ಯಕೀಯ ಚಿಕಿತ್ಸೆ ಕಾರಣಗಳ ಹಿನ್ನೆಲೆಯಲ್ಲಿ ಗೃಹಬಂಧನದಲ್ಲಿರಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಮುಂಬೈ: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿ ಗೌತಮ್ ನವ್ಲಾಖಾ ತಲೋಜಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವೈದ್ಯಕೀಯ ಚಿಕಿತ್ಸೆ ಕಾರಣಗಳ ಹಿನ್ನೆಲೆಯಲ್ಲಿ ಗೃಹಬಂಧನದಲ್ಲಿರಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

2020ರಿಂದ ನವ್ಲಾಖಾ ಜೈಲಿನಲ್ಲಿದ್ದರು. ನವ್ಲಾಖಾ ಅವರು ಉದ್ದೇಶಪೂರ್ವಕವಾಗಿ ತಮ್ಮ ಆರೋಗ್ಯದ ಬಗ್ಗೆ ನ್ಯಾಯಾಲಯವನ್ನು ದಾರಿ ತಪ್ಪಿಸಿದ್ದಾರೆ ಎಂಬ ತನಿಖಾ ಸಂಸ್ಥೆಯ ವಾದವನ್ನು ನ್ಯಾಯಾಲಯ ತಳ್ಳಿಹಾಕಿತ್ತು. ಎನ್‌ಐಎ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಶುಕ್ರವಾರ ನವ್ಲಾಖಾರನ್ನು ಮುಂದಿನ 24 ಗಂಟೆಗಳೊಳಗೆ ಗೃಹಬಂಧನದಲ್ಲಿ ಇರಿಸುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ, ನವ್ಲಾಖಾ ಅವರನ್ನು ನವಿ ಮುಂಬೈನಲ್ಲಿ ಬಂಧನಕ್ಕಾಗಿ ಆಯ್ಕೆ ಮಾಡಿದ ಮನೆಗೆ ಕರೆದೊಯ್ಯಲಾಗಿದ್ದು ಒಂದು ತಿಂಗಳ ಕಾಲ ಗೃಹ ಬಂಧನದಲ್ಲಿರಲ್ಲಿದ್ದಾರೆ.

ಕಳೆದ ವಾರವಷ್ಟೇ ಸುಪ್ರೀಂ ಕೋರ್ಟ್ ಗೃಹಬಂಧನಕ್ಕೆ ಆದೇಶ ನೀಡಿತ್ತು!
ಗೌತಮ್ ನವ್ಲಾಖಾ ಅವರನ್ನು 48 ಗಂಟೆಗಳ ಒಳಗೆ ಗೃಹಬಂಧನದಲ್ಲಿರಿಸಬೇಕು ಎಂದು ಸುಪ್ರೀಂ ಕೋರ್ಟ್ ಕಳೆದ ವಾರವಷ್ಟೇ ಆದೇಶ ನೀಡಿತ್ತು. ಎನ್ಐಎ ಮತ್ತು ಇಡಿ ಇದನ್ನು ವಿರೋಧಿಸಿದ್ದರೂ. ಶುಕ್ರವಾರದ ವಿಚಾರಣೆಯಲ್ಲಿ ನ್ಯಾಯಾಲಯವು ತನಿಖಾ ಸಂಸ್ಥೆಗಳಿಗೆ ಛೀಮಾರಿ ಹಾಕಿದೆ. ನವ್ಲಾಖಾ ಅವರು ಬಂಧನಕ್ಕೆ ಆಯ್ಕೆ ಮಾಡಿಕೊಂಡಿರುವ ಸ್ಥಳ ಕಮ್ಯುನಿಸ್ಟ್ ಪಕ್ಷದ ಕಚೇರಿ ಎಂಬುದು ಎನ್ಐಎ ವಾದವಾಗಿತ್ತು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್, ಇದರಲ್ಲಿ ತಪ್ಪೇನು ಎಂದು ಹೇಳಿತ್ತು. ಕಮ್ಯುನಿಸ್ಟ್ ಪಕ್ಷ ದೇಶದ ಮಾನ್ಯತೆ ಪಡೆದ ಪಕ್ಷ ಎಂದು ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT