ಭಾರತೀಯ ಸೇನೆ 
ದೇಶ

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಒಳ ನುಸುಳುಕೋರನ ಹೊಡೆದುರುಳಿಸಿದ ಸೇನೆ!

ಭಾರತ-ಪಾಕಿಸ್ತಾನದ ಗಡಿ ಪ್ರದೇಶ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಒಳನುಸುಳುಕೋರನೋರ್ವನನ್ನು ಶನಿವಾರ ಹೊಡೆದುರುಳಿಸಿದೆ.

ಶ್ರೀನಗರ: ಭಾರತ-ಪಾಕಿಸ್ತಾನದ ಗಡಿ ಪ್ರದೇಶ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಒಳನುಸುಳುಕೋರನೋರ್ವನನ್ನು ಶನಿವಾರ ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಶಂಕಿತ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದೆ. ಶನಿವಾರ ಪಾಕಿಸ್ತಾನದ ಒಳನುಸುಳುಕೋರನನ್ನು ಸೇನೆ ಹೊಡೆದುರುಳಿಸಿದ್ದು, ಇಡೀ ಪ್ರದೇಶವನ್ನು ಇದೀಗ ಸೇನೆ ಸುತ್ತುವರೆದಿದೆ ಎನ್ನಲಾಗಿದೆ.

ಈ ಬಗ್ಗೆ ಸೇನಾಧಿಕಾರಿಗಳು ಮಾಹಿತಿ ನೀಡಿದ್ದು, ನೌಶೇರಾ ಸೆಕ್ಟರ್‌ನ ಕಲಾಲ್ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ ತಡೆದಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಒಳನುಸುಳುಕೋರನನ್ನು ಸೇನೆ ಹೊಡೆದುರುಳಿಸಿದೆ. ಇಡೀ ಪ್ರದೇಶವನ್ನು ಸೇನೆ ಸುತ್ತುವರೆದಿದ್ದು ಶೋಧ ಕಾರ್ಯ ಆರಂಭಿಸಿದೆ ಎಂದು ಹೇಳಿದ್ದಾರೆ.

ಎಲ್ಒಸಿಯ ನೌಶೇರಾ ಸೆಕ್ಟರ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಒಳ ನುಸುಳುವಿಕೆ ಚಟುವಟಿಕೆ ತೀವ್ರವಾಗಿದ್ದು, ಇದೇ ಕಾರಣತ್ತೆ ನೌಶೇರಾ ಸೇರಿದಂತೆ ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ಭಾರತೀಯ ಸೇನೆ ತನ್ನ ಗಸ್ತು ತೀವ್ರಗೊಳಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!