ದೇಶ

ಭಗವಾನ್ ಶ್ರೀರಾಮ ಎಲ್ಲರಿಗೂ ದೇವರು; ಧಾರ್ಮಿಕ ವಿಭಜನೆಯ ವಿರುದ್ಧ ಫಾರೂಖ್ ಅಬ್ದುಲ್ಲಾ ಎಚ್ಚರಿಕೆ 

Srinivas Rao BV

ಶ್ರೀನಗರ: ಭಗವಾನ್ ಶ್ರೀರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಧರ್ಮಾತೀತವಾಗಿ ಎಲ್ಲರಿಗೂ ದೇವರು ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ. 

ಧರ್ಮದ ಆಧಾರದ ಮೇಲೆ ಜನರನ್ನು ವಿಭಜನೆ ಮಾಡಲಾಗುತ್ತಿರುವುದರ ಬಗ್ಗೆಯೂ ಫಾರೂಖ್ ಅಬ್ದುಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದು, ನಮ್ಮ ದೇಶ ಬಲಿಷ್ಠವಾಗಬೇಕಾದಲ್ಲಿ ನಾವು ಒಟ್ಟಾಗಿ ನಿಲ್ಲಬೇಕು ಎಂದು ಫಾರೂಖ್ ಅಬ್ದುಲ್ಲಾ ಕರೆ ನೀಡಿದ್ದಾರೆ. 

ಚುನಾವಣಾ ಸಮಾವೇಶವೊಂದರಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿರುವ ಫಾರೂಖ್ ಅಬ್ದುಲ್ಲಾ,  ಚುನಾವಣೆ ಬರುತ್ತಿದ್ದಂತೆಯೇ ನಿಮ್ಮ ಬಳಿ ಬಂದು ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಾರೆ. ಭಾರತದಲ್ಲಿ ಶೇ.70 ರಿಂದ 80 ರಷ್ಟು ಹಿಂದೂ ಜನಸಂಖ್ಯೆ ಇದೆ. ಆದರೂ ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ನೀವು ಭಾವಿಸುತ್ತೀರಾ ಎಂದು ಪ್ರಶ್ನಿಸಿದರು?.

ಕೆಟ್ಟ ಧರ್ಮ ಎಂಬುದು ಇಲ್ಲ. ಆದರೆ ಮನುಷ್ಯರು ಭ್ರಷ್ಟರಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಾರೆ. ಈ ರೀತಿಯಾಗಿ ಹೇಳುವವರನ್ನು ನಂಬಬೇಡಿ, ಅದಕ್ಕೆ ಬಲಿಯಾಗಬೇಡಿ ಎಂದು ಫಾರೂಖ್ ಅಬ್ದುಲ್ಲಾ ಮನವಿ ಮಾಡಿದ್ದಾರೆ. 

“ನ್ಯಾಶನಲ್ ಕಾನ್ಫರೆನ್ಸ್ ಎಂದಿಗೂ ಪಾಕಿಸ್ತಾನದ ಪರವಾಗಿರಲಿಲ್ಲ. ಯಾವಾಗಲೂ ಭಾರತದೊಂದಿಗೆ ಗಟ್ಟಿಯಾಗಿ ನಿಂತಿದೆ. ಜಿನ್ನಾ ಅವರು ನನ್ನ ತಂದೆಯನ್ನು ಭೇಟಿಯಾಗಲು ಬಂದಿದ್ದರು, ಆದರೆ ನಾವು ಅವರೊಂದಿಗೆ ಕೈಜೋಡಿಸಲು ನಿರಾಕರಿಸಿದ್ದೇವೆ ಎಂದು ಫಾರೂಖ್ ಅಬ್ದುಲ್ಲಾ ಸ್ಪಷ್ಟಪಡಿಸಿದ್ದಾರೆ.

SCROLL FOR NEXT