ಅಜಂ ಖಾನ್ 
ದೇಶ

ದ್ವೇಷ ಭಾಷಣ ಪ್ರಕರಣದಲ್ಲಿ ಆಜಂ ಖಾನ್‌ಗೆ ಜಾಮೀನು

ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ರಾಂಪುರ: ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಅಜಂ ಖಾನ್ ಅವರು ತಮ್ಮ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

2019 ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಲೋಕ್ ದುಬೆ ಅವರು ಅಕ್ಟೋಬರ್ 27 ರಂದು ಅಜಂ ಖಾನ್ ದೋಷಿ ಎಂದು ತೀರ್ಪು ನೀಡಿದ್ದರು ಮತ್ತು ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ್ದರು. 

ಆ ಸಮಯದಲ್ಲಿ ಅಜಂ ಖಾನ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ನಂತರ ನಿಯಮಿತ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಯಿತು ಎಂದು ವಕೀಲರು ಹೇಳಿದ್ದಾರೆ.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯ ಅಜಂ ಖಾನ್‌ ಅವರಿಗೆ ನಿಯಮಿತ ಜಾಮೀನು ನೀಡಿದೆ ಎಂದು ವಕೀಲರು ತಿಳಿಸಿದ್ದಾರೆ.

ದ್ವೇಷ ಭಾಷಣ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಅಜಂ ಖಾನ್ ಅವರನ್ನು ಶಾಸಕ ಸ್ಥಾನದಿಂದ  ಅನರ್ಹಗೊಳಿಸಲಾಗಿದೆ. ಅವರಿಂದ ತೆರವಾದ ಸ್ಥಾನಕ್ಕೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT