ಪಿಎಂ ನರೇಂದ್ರ ಮೋದಿ 
ದೇಶ

'ರೋಜ್ ಗಾರ್ ಮೇಳ' ಡಬಲ್ ಇಂಜಿನ್ ಸರ್ಕಾರಗಳ ಡಬಲ್ ಪ್ರಯೋಜನವಾಗಿದೆ: ಪ್ರಧಾನಿ ನರೇಂದ್ರ ಮೋದಿ

ಇದು ಡಬಲ್ ಇಂಜಿನ್ ಸರ್ಕಾರಗಳ ಡಬಲ್ ಪ್ರಯೋಜನವಾಗಿದೆ. ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಅಭಿಯಾನವು ನಿರಂತರವಾಗಿ ಮುಂದುವರಿಯುತ್ತದೆ ಎಂದು ಕೇಂದ್ರ ಸರ್ಕಾರ ಆಯೋಜಿಸಿದ್ದ ಎರಡನೇ 'ರೋಜ್ ಗಾರ್ ಮೇಳ' (ಉದ್ಯೋಗ ಮೇಳ) ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. 

ನವದೆಹಲಿ: ಇದು ಡಬಲ್ ಇಂಜಿನ್ ಸರ್ಕಾರಗಳ ಡಬಲ್ ಪ್ರಯೋಜನವಾಗಿದೆ. ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಅಭಿಯಾನವು ನಿರಂತರವಾಗಿ ಮುಂದುವರಿಯುತ್ತದೆ ಎಂದು ಕೇಂದ್ರ ಸರ್ಕಾರ ಆಯೋಜಿಸಿದ್ದ ಎರಡನೇ 'ರೋಜ್ ಗಾರ್ ಮೇಳ' (ಉದ್ಯೋಗ ಮೇಳ) ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. 

ಅವರು ಇಂದು 71,000 ಕ್ಕೂ ಹೆಚ್ಚು ಯುವಜನತೆಗೆಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು. ಕಳೆದ ಒಂದು ತಿಂಗಳಲ್ಲಿ ಎನ್‌ಡಿಎ ಆಡಳಿತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ರೀತಿಯ ಅಭಿಯಾನಗಳನ್ನು ನಡೆಸಲಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿಯವರು ಒಟ್ಟು 71,056 ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದರು. ಗುಜರಾತ್ ಮತ್ತು ಹಿಮಾಚಲ ಪ್ರದೇಶ ಹೊರತುಪಡಿಸಿ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ದೇಶಾದ್ಯಂತ 45 ಸ್ಥಳಗಳಲ್ಲಿ ನೇಮಕಾತಿ ಪತ್ರಗಳ ಭೌತಿಕ ಪ್ರತಿಗಳನ್ನು ಹಸ್ತಾಂತರಿಸಲಾಗಿದೆ.

ಕಳೆದ ಒಂದು ತಿಂಗಳಲ್ಲಿ ಮಹಾರಾಷ್ಟ್ರ ಮತ್ತು ಗುಜರಾತ್‌ಗಳು ಸಾವಿರಾರು ನೇಮಕಾತಿ ಪತ್ರಗಳನ್ನು ನೀಡಿವೆ. ಕೆಲವು ದಿನಗಳ ಹಿಂದೆ, ಉತ್ತರ ಪ್ರದೇಶ ಸರ್ಕಾರವು ಹಲವಾರು ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು, ಚಂಡೀಗಢ ಕೂಡ ರೋಜ್‌ಗಾರ್ ಮೇಳಗಳನ್ನು ಆಯೋಜಿಸಿದ್ದು, ಸಾವಿರಾರು ಯುವಕರಿಗೆ ಉದ್ಯೋಗಗಳನ್ನು ಹಸ್ತಾಂತರಿಸಿದೆ ಎಂದರು. 

ಗೋವಾ ಮತ್ತು ತ್ರಿಪುರಾ ಸರ್ಕಾರಗಳು ನವೆಂಬರ್ 24 ಮತ್ತು ನವೆಂಬರ್ 28 ರಂದು ರೋಜ್ ಗಾರ್ ಮೇಳವನ್ನು ಆಯೋಜಿಸುತ್ತಿವೆ. ರೋಜ್‌ಗಾರ್ ಮೇಳದ ಸಂಘಟನೆಯು ದೇಶದ ಯುವಕರಿಗೆ ಉದ್ಯೋಗಗಳನ್ನು ಒದಗಿಸಲು ಸರ್ಕಾರವು ಮಿಷನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ತೋರಿಸಿದೆ ಎಂದು ಪ್ರಧಾನಿ ಹೇಳಿದರು.

ಯುವಕರು ದೇಶದ ದೊಡ್ಡ ಶಕ್ತಿಯಾಗಿದ್ದು, ಅವರ ಪ್ರತಿಭೆಯನ್ನು ರಾಷ್ಟ್ರ ನಿರ್ಮಾಣದಲ್ಲಿ ಬಳಸಿಕೊಳ್ಳಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆಯ ಪ್ರಕಾರ ಅವರ ಬದ್ಧತೆಯನ್ನು ಈಡೇರಿಸುವತ್ತ ಈ ಅಭಿಯಾನವು ಒಂದು ಹೆಜ್ಜೆಯಾಗಿದೆ. ಇದು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರವಾಗಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ನೀಡುವಲ್ಲಿ ವೇಗವರ್ಧಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಪ್ರಧಾನ ಮಂತ್ರಿಗಳು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT