ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ: ಮಾದಕ ವ್ಯಸನಿಯಿಂದ ಬರ್ಬರ ಹತ್ಯೆ

ಮಾದಕ ವ್ಯಸನಿ ಮಗನೊಬ್ಬ, ತಂದೆ, ಅಜ್ಜಿ, ಇಬ್ಬರು ಸಹೋದರಿಯರು ಸೇರಿ ಒಟ್ಟು ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಭಯಾನಕ ಘಟನೆ ದೆಹಲಿಯ ಪಾಲಂ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

ನವದೆಹಲಿ: ಮಾದಕ ವ್ಯಸನಿ ಮಗನೊಬ್ಬ, ತಂದೆ, ಅಜ್ಜಿ, ಇಬ್ಬರು ಸಹೋದರಿಯರು ಸೇರಿ ಒಟ್ಟು ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಭಯಾನಕ ಘಟನೆ ದೆಹಲಿಯ ಪಾಲಂ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

ಆರೋಪಿ ಕೇಶವ್ ತನ್ನ ತಂದೆ, ಇಬ್ಬರು ಸಹೋದರಿಯರು ಮತ್ತು ಅಜ್ಜಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮೃತದೇಹಗಳು ಮನೆಯ ಆವರಣದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು ವಿಷಯ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿ ಕೇಶವನನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿ ಮಾದಕ ವ್ಯಸನಿಯಾಗಿದ್ದು, ತನ್ನ ಹತ್ತಿರದ ಸಂಬಂಧಿಕರನ್ನು ಕೊಂದಿದ್ದಾನೆ. ಮಾಹಿತಿ ಪ್ರಕಾರ, ಆತನ ಇಬ್ಬರು ಸಹೋದರಿಯರು, ತಂದೆ ಮತ್ತು ಅಜ್ಜಿಯ ಮೃತದೇಹಗಳು ರಕ್ತದಲ್ಲಿ ತೊಯ್ದು ಬಿದ್ದಿದ್ದವು. ಮಹಿಳೆಯ ಶವ ನೆಲದ ಮೇಲೆ ಬಿದ್ದಿತ್ತು. ಉಳಿದ ಇಬ್ಬರು ಸದಸ್ಯರ ಶವಗಳು ಸ್ನಾನಗೃಹದಲ್ಲಿ ಪತ್ತೆಯಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!