ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 408 ಹೊಸ ಪ್ರಕರಣ ಪತ್ತೆ, 5 ಮಂದಿ ಸಾವು

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 408 ಹೊಸ ಪ್ರಕರಣ ಪತ್ತೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 408 ಹೊಸ ಪ್ರಕರಣ ಪತ್ತೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,70,483ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,601ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,881ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 568 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,34,001ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 2,55,221 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,45,21,555 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,88,78,448 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!