ದೇಶ

'ಮರಾಠಿ'ಯಲ್ಲಿ ಎಂಬಿಬಿಎಸ್ ಪುಸ್ತಕ: 7 ಸದಸ್ಯರ ಸಮಿತಿ ರಚಿಸಿದ ಮಹಾರಾಷ್ಟ್ರ ಸರ್ಕಾರ

Lingaraj Badiger

ಮುಂಬೈ: ಮರಾಠಿ ಭಾಷೆಯಲ್ಲಿ ಎಂಬಿಬಿಎಸ್ ಕೋರ್ಸ್ ಪುಸ್ತಕಗಳನ್ನು ಪ್ರಕಟಿಸಲು ಮಾರ್ಗಸೂಚಿ ಸಿದ್ಧಪಡಿಸಲು ಮಹಾರಾಷ್ಟ್ರ ಸರ್ಕಾರ ಏಳು ಸದಸ್ಯರ ಸಮಿತಿ ರಚಿಸಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಮಧ್ಯಪ್ರದೇಶ ಸರ್ಕಾರ ಇತ್ತೀಚೆಗಷ್ಟೇ ಎಂಬಿಬಿಎಸ್(ಬ್ಯಾಚುಲರ್ ಆಫ್ ಮೆಡಿಸಿನ್ ಮತ್ತು ಬ್ಯಾಚುಲರ್ ಆಫ್ ಸರ್ಜರಿ) ಕೋರ್ಸ್‌ಗಾಗಿ ಹಿಂದಿಯಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಮರಾಠಿಯಲ್ಲಿ ವೈದ್ಯಕೀಯ ಶಿಕ್ಷಣ ನೀಡಲು ಮುಂದಾಗಿದೆ.

ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಇಲಾಖೆಯ ಜಂಟಿ ನಿರ್ದೇಶಕ ಅಜಯ್ ಚಂದನ್‌ವಾಲೆ ಅವರ  ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ಎಂಬಿಬಿಎಸ್ ಕೋರ್ಸ್ ಪುಸ್ತಕಗಳನ್ನು ಹಿಂದಿಯಲ್ಲಿ ಪ್ರಕಟಿಸಿದ ಮಧ್ಯಪ್ರದೇಶದ ಅಧಿಕಾರಿಗಳೊಂದಿಗೆ ನಾವು ಮಾತನಾಡಿದ್ದೇವೆ. ಮುಂದಿನ ಹಂತದಲ್ಲಿ ಮಹಾರಾಷ್ಟ್ರದಲ್ಲಿ ಸಮಿತಿ ಸದಸ್ಯರ ಮೊದಲ ಸಭೆ ನಡೆಸಿ ಮರಾಠಿಯಲ್ಲಿ ಪುಸ್ತಕ ಪ್ರಕಟಣೆಯ ಮಾರ್ಗಸೂಚಿ ಕುರಿತು ಚರ್ಚಿಸಲಾಗುವುದು. ಮುಂದಿನ ವಾರ ಮುಂಬೈನಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

SCROLL FOR NEXT