ಅರವಿಂದ್ ಕೇಜ್ರಿವಾಲ್ 
ದೇಶ

ಅಬಕಾರಿ ಹಗರಣದಲ್ಲಿ ಸಿಸೋಡಿಯಾ ಸಿಲುಕಿಸಲು ಯತ್ನ: ದೆಹಲಿ ಸಿಎಂ ಕೇಜ್ರಿವಾಲ್

ಅಬಕಾರಿ ನೀತಿ ಹಗರಣದ "ನಕಲಿ" ಪ್ರಕರಣದಲ್ಲಿ ತಮ್ಮ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಲುಕಿಸಲು ಪ್ರಯತ್ನಿಸಲಾಗಿದೆ. ಆದರೆ ಸಿಬಿಐ ತನಿಖೆಯಲ್ಲಿ ಅವರ ವಿರುದ್ಧ ಏನೂ ಸಿಕ್ಕಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಅಬಕಾರಿ ನೀತಿ ಹಗರಣದ "ನಕಲಿ" ಪ್ರಕರಣದಲ್ಲಿ ತಮ್ಮ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಲುಕಿಸಲು ಪ್ರಯತ್ನಿಸಲಾಗಿದೆ. ಆದರೆ ಸಿಬಿಐ ತನಿಖೆಯಲ್ಲಿ ಅವರ ವಿರುದ್ಧ ಏನೂ ಸಿಕ್ಕಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಸಿಬಿಐ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಮನೀಶ್ ಹೆಸರಿಲ್ಲ. ಇಡೀ ಪ್ರಕರಣ ನಕಲಿ. ದಾಳಿಯಲ್ಲಿ ಏನೂ ಪತ್ತೆಯಾಗಿಲ್ಲ. ಒಟ್ಟು 800 ಅಧಿಕಾರಿಗಳು ನಾಲ್ಕು ತಿಂಗಳು ತನಿಖೆ ನಡೆಸಿದ್ದರೂ ಏನೂ ಸಿಕ್ಕಿಲ್ಲ. ಕೋಟ್ಯಂತರ ಬಡ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆಯನ್ನು ಮನೀಶ್ ಸಿಸೋಡಿಯಾ ನೀಡಿದ್ದಾರೆ. ಶಿಕ್ಷಣದಲ್ಲಿ ಕ್ರಾಂತಿಯನ್ನೇ ಮಾಡಿದ ವ್ಯಕ್ತಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವ ಮೂಲಕ ಮಾನಹಾನಿ ಮಾಡಲು ಸಂಚು ರೂಪಿಸಿದ್ದಕ್ಕೆ ನಾನು ವಿಷಾದಿಸುತ್ತೇನೆ ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಶುಕ್ರವಾರ ಇಬ್ಬರು ಉದ್ಯಮಿಗಳು ಸೇರಿದಂತೆ ಏಳು ಆರೋಪಿಗಳ ವಿರುದ್ಧ ಅಬಕಾರಿ ನೀತಿ ಹಗರಣ ಪ್ರಕರಣದ ಮೊದಲ ಚಾರ್ಜ್ ಶೀಟ್ ಸಲ್ಲಿಸಿದೆ.

ಸಿಬಿಐ ಎಫ್‌ಐಆರ್‌ನಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಹೆಸರು ಇದೆ. ಆದರೆ ಇಂದು ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ ಅವರ ಹೆಸರು ಇಲ್ಲ. ತನಿಖಾ ಸಂಸ್ಥೆಯು ತನಿಖೆ ಕೈಗೆತ್ತಿಕೊಂಡ 60 ದಿನಗಳಲ್ಲಿ ಸಲ್ಲಿಸಿದ ಮೊದಲ ಚಾರ್ಜ್‌ಶೀಟ್‌ ಇದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

ಬಕ್ರೀದ್: ಗೋವಿಗೆ 'ರಾಷ್ಟ್ರೀಯ ಪ್ರಾಣಿ' ಸ್ಥಾನಮಾನ ನೀಡಿ; ಈದ್ ಆಚರಣೆ ಸಂದರ್ಭದಲ್ಲೇ ಮುಸ್ಲಿಂ ಸಂಘಟನೆಗಳ ಆಗ್ರಹ

SCROLL FOR NEXT