ಸಾಂದರ್ಭಿಕ ಚಿತ್ರ 
ದೇಶ

ತ್ರಿಪುರಾ: ಭಾರತ್ ಜೋಡೋ ಯಾತ್ರೆ ಮೇಲೆ ಬಿಜೆಪಿ ದಾಳಿ, 12 ಮಂದಿಗೆ ಗಾಯ: ಕಾಂಗ್ರೆಸ್ ಆರೋಪ

ತ್ರಿಪುರಾದ ಎರಡು ಕಡೆ ಶುಕ್ರವಾರ ಕಾಂಗ್ರೆಸ್ ನ ರಾಜ್ಯ ಮಟ್ಟದ ಭಾರತ್ ಜೋಡೋ ಯಾತ್ರೆ ಮೇಲೆ ನಡೆದ ದಾಳಿಯಿಂದ ಮೂವರು ಪೊಲೀಸರು ಸೇರಿದಂತೆ ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ತ್ರಿಪುರಾ: ತ್ರಿಪುರಾದ ಎರಡು ಕಡೆ ಶುಕ್ರವಾರ ಕಾಂಗ್ರೆಸ್ ನ ರಾಜ್ಯ ಮಟ್ಟದ ಭಾರತ್ ಜೋಡೋ ಯಾತ್ರೆ ಮೇಲೆ ನಡೆದ ದಾಳಿಯಿಂದ ಮೂವರು ಪೊಲೀಸರು ಸೇರಿದಂತೆ ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಾಹ್ನ 3.30ರ ಸುಮಾರಿಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ದಕ್ಷಿಣ ತ್ರಿಪುರಾ ಜಿಲ್ಲೆಯ ಸಂತೀರ್ ಬಜಾರ್ ಮಾರುಕಟ್ಟೆ ಕಡೆಗೆ ಮೆರವಣಿಗೆಯಲ್ಲಿ ಸಾಗುತ್ತಿದ್ದಾಗ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಈ ದಾಳಿಯ ಹಿಂದೆ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಬೆಂಬಲಿಗರ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದ್ದಕ್ಕಿದ್ದಂತೆ ಯುವಕರ ಗುಂಪೊಂದು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಮೂವರು ಪೊಲೀಸ್ ಪೇದೆಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಇದು ಉದ್ರಿಕ್ತ ಪರಿಸ್ಥಿತಿಗೆ ಕಾರಣವಾಯಿತು ಎಂದು ಶಾಂತಿರ್ ಬಜಾರ್ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಅನುಪಮ್ ದಾಸ್ ತಿಳಿಸಿದ್ದಾರೆ.

ಪರಿಸ್ಥಿತಿ ಹತೋಟಿ ಮೀರುತ್ತಿದ್ದಂತೆ ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು, ಈ ವೇಳೆ ಕೆಲವರು ಗಾಯಗೊಂಡರು. ದಾಳಿಯಲ್ಲಿ ಆರು-ಏಳು ಕಾಂಗ್ರೆಸ್ ಬೆಂಬಲಿಗರು ಗಾಯಗೊಂಡಿದ್ದು, ಇದರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು. ನಂತರ, ಲಾಠಿ ಚಾರ್ಜ್ ಮಾಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಬೆಂಬಲಿಗರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದು,  ಬಿಜೆಪಿ ದಾಳಿಯಲ್ಲಿ ಪಕ್ಷದ 15 ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಆಸಿಶ್ ಸಾಹಾ ಹೇಳಿದ್ದಾರೆ.

ಪಶ್ಚಿಮ ತ್ರಿಪುರಾ ಜಿಲ್ಲೆಯ ಅಮತಾಲಿಯಲ್ಲಿ ಇಂತಹುದೇ ದಾಳಿ ನಡೆಸಲಾಗಿದೆ. ಘಟನೆ ಸಂಬಂಧ  ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಆದರೆ ಪೊಲೀಸರು  ಸ್ವಯಂಪ್ರೇರಿತ ತನಿಖೆಯನ್ನು ಪ್ರಾರಂಭಿಸುತ್ತಾರೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎಂದು ಪಶ್ಚಿಮ ತ್ರಿಪುರದ ಎಸ್ ಪಿ ಶಂಕರ್ ದಾಸ್ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಭಾರತ್ ಜೋಡೋ ಯಾತ್ರೆಯ ಭಾಗವಾಗಿ, ಪಕ್ಷದ ವಿವಿಧ ರಾಜ್ಯ ಘಟಕಗಳು ಇದೇ ರೀತಿಯ ಮೆರವಣಿಗೆಗಳನ್ನು ಆಯೋಜಿಸುತ್ತಿವೆ.

ತ್ರಿಪುರಾ ರಾಜ್ಯ ಕಾಂಗ್ರೆಸ್ ಎಲ್ಲಾ ಉಪವಿಭಾಗಗಳಲ್ಲಿ ಇಂತಹ ಯಾತ್ರೆಗಳನ್ನು ಆಯೋಜಿಸಿದೆ. ಹಿಂಸಾಚಾರದಲ್ಲಿ ತೊಡಗುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಮಾಣಿಕ್ ಸಹಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...