ಪ್ರಧಾನಿ ಮೋದಿ 
ದೇಶ

26//11 ಮುಂಬೈ ದಾಳಿಗೆ 14 ವರ್ಷ: ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

26/11ರ ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದರು.

ನವದೆಹಲಿ: 26/11ರ ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದರು.

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಅವರು, ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

"ಇಂದು ಮುಂಬೈ ಭಯೋತ್ಪಾದನಾ ದಾಳಿಯ ವರ್ಷಾಚರಣೆಯಾಗಿದೆ. 14 ವರ್ಷಗಳ ಹಿಂದೆ, ಭಾರತವು ತನ್ನ ಸಂವಿಧಾನ ಮತ್ತು ನಾಗರಿಕರ ಹಕ್ಕುಗಳನ್ನು ಆಚರಿಸುತ್ತಿದ್ದಾಗ, ಮಾನವೀಯತೆಯ ಶತ್ರುಗಳು ಭಾರತದ ಮೇಲೆ ಅತಿದೊಡ್ಡ ಭಯೋತ್ಪಾದಕ ದಾಳಿಯನ್ನು ನಡೆಸಿದರು. ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆಂದು ಹೇಳಿದರು.

ಬಳಿಕ ಸಂವಿಧಾನ ದಿನ ಕುರಿತು ಮಾತನಾಡಿ, ಡಾ.ಬಿಆರ್ ಅಂಬೇಡ್ಕರ್ ಮತ್ತು ನಮಗೆ ಸಂವಿಧಾನವನ್ನು ನೀಡಿದ ಎಲ್ಲ ಮಹನೀಯರಿಗೆ ನಮನ ಸಲ್ಲಿಸಿದರು. ನಮ್ಮ ರಾಷ್ಟ್ರಕ್ಕಾಗಿ ಅವರ ದೃಷ್ಟಿಯನ್ನು ಈಡೇರಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.

ಭಾರತವೂ ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಕಾರಣ ಇಂದಿನ ಸಂವಿಧಾನ ದಿನಾಚರಣೆ ವಿಶೇಷವಾಗಿದೆ ಎಂದರು.

2008 ನವೆಂಬರ್​ 26 ಮುಂಬೈ ನಗರದಲ್ಲಿ ನಡೆಯಬಾರದ ಘೋರ ದುರಂತವೊಂದು ನಡೆದುಹೋಗಿತ್ತು. ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್‌-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ದಾಳಿ ನಡೆಸಿ ಇಂದಿಗೆ 14 ವರ್ಷಗಳು ಕಳೆದಿವೆ.

ಸತತ ಮೂರು ದಿನಗಳ ಕಾಲ ದೇಶದ ಆರ್ಥಿಕ ರಾಜಧಾನಿ ಮುಂಬೈ ಮಹಾನಗರಿ ಉಗ್ರರ ಕಪಿಮುಷ್ಟಿಯಲ್ಲಿ ನಲುಗಿತ್ತು. ಲಷ್ಕರ್‌ ಉಗ್ರ ಸಂಘಟನೆಯ 10 ಉಗ್ರರು ಜನನಿಬಿಡ ಪ್ರದೇಶಗಳಲ್ಲಿ ಜನರ ಮಾರಣಹೋಮವನ್ನೇ ನಡೆಸಿದ್ದರು. ಸಿಕ್ಕ ಸಿಕ್ಕವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಸಮುದ್ರ ಮಾರ್ಗದಿಂದ ಬಂದ ಈ ದುಷ್ಕರ್ಮಿಗಳು ತಾಜ್‌ ಮಹಲ್‌ ಹೊಟೇಲ್, ಒಬೇರಾಯ್‌ ಹೊಟೇಲ್‌, ಲಿಯೋಪೋಲ್ಡ್‌ ಕೆಫೆ, ನಾರಿಮನ್‌ ಹೌಸ್‌, ಛತ್ರಪತಿ ಶಿವಾಜಿ ರೈಲ್ವೆ ಟರ್ಮಿನಸ್‌ ಮೊದಲಾದ ಕಡೆ ಮನಬಂದಂತೆ ಬಂದೂಕು ಮತ್ತು ಬಾಂಬಿನ ಮೂಲಕ ದಾಳಿ ನಡೆಸಿದರು. ಒಟ್ಟು ನಾಲ್ಕು ದಿನಗಳ ಕಾಲ ದಾಳಿ ನಡೆಸಿದ್ದರು.

ಈ ದುರ್ಘಟನೆಯಲ್ಲಿ ಆರು ಜನ ಅಮೆರಿಕಾದ ನಾಗರಿಕರು, ಹಲವು ವಿದೇಶೀಯರೂ ಸೇರಿದಂತೆ 166 ಜನರು ಸಾವಿಗೀಡಾಗಿದ್ದರು. 300ಕ್ಕೂ ಅಧಿಕ ಜನರು ಗಾಯಾಳುಗಳಾಗಿದ್ದರು. ಭಾರತದ ಇತಿಹಾಸದಲ್ಲಿ ಕರಾಳ ಅಧ್ಯಾಯ ಆಗಿತ್ತು. ಇಂದಿಗೆ ಆ ಘಟನೆ ನಡೆದು 14 ವರ್ಷಗಳು ಕಳೆದಿವೆ. ಗಾಯ ಮಾಸಿದರೂ, ಗಾಯದ ಗುರುತುಗಳು ಹಾಗೇ ಇವೆ. ಇಂದಿಗೂ ಉಗ್ರರು ತಮ್ಮ ಕ್ರೌರ್ಯ ಮೆರೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT