ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 389 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 5,395ಕ್ಕೆ ಇಳಿಕೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 389 ಹೊಸ ಪ್ರಕರಣ ಪತ್ತೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 389 ಹೊಸ ಪ್ರಕರಣ ಪತ್ತೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,71,219ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,608ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,395ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 506 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,35,216ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 2,67,170 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,50,18,779 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,199,028,193 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್