ಆತ್ಮಹತ್ಯೆ 
ದೇಶ

ಇಂಗ್ಲೀಷ್ ಮಾತನಾಡಲು ಬಾರದ ಕಾರಣ: ಆತ್ಮಹತ್ಯೆಗೆ ಶರಣಾದ 17 ವರ್ಷದ ಬಾಲಕಿ! 

ಇಂಗ್ಲೀಷ್ ಭಾಷೆಯನ್ನು ನಿರರ್ಗಳವಾಗಿ ಮಾತನಾಡಲು ಬಾರದ ಕಾರಣ 17 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಭೋಪಾಲ್: ಇಂಗ್ಲೀಷ್ ಭಾಷೆಯನ್ನು ನಿರರ್ಗಳವಾಗಿ ಮಾತನಾಡಲು ಬಾರದ ಕಾರಣ 17 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
 
ನ್ಯೂ ಗೌರಿನಗರ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಶೈಲ್ ಕುಮಾರಿ ತನ್ನ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾಳೆ. 

ಸಂತ್ರಸ್ತೆಯ ಸಹೋದರಿ ಹಾಗೂ ತಾಯಿ ನೀಡಿರುವ ಮಾಹಿತಿಯ ಪ್ರಕಾರ, ಮೃತ ಬಾಲಕಿ ಗಗನಸಖಿಯಾಗುವುದಕ್ಕಾಗಿ ತರಬೇತಿ ಪಡೆಯುವವಳಿದ್ದಳು  ಆದರೆ ಇಂಗ್ಲೀಷ್  ಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡಲು ಬರುತ್ತಿರಲಿಲ್ಲ. ಆದ್ದರಿಂದ ಇಂಗ್ಲೀಷ್ ಮಾತನಾಡುವ ತರಬೇತಿಯನ್ನೂ ಪಡೆಯುತ್ತಿದ್ದಳು ಎಂದು ಹೀರಾನಗರ್ ಪೊಲೀಸ್ ಠಾಣೆಯ ಉಸ್ತುವಾರಿ ದಿಲೀಪ್ ಪುರಿ ಹೇಳಿದ್ದಾರೆ.

ಬಾಲಕಿಗೆ ತನ್ನ ಸ್ನೇಹಿತರಷ್ಟು ಚೆನ್ನಾಗಿ ಇಂಗ್ಲೀಷ್ ಭಾಷೆ ಮಾತನಾಡಲು ಬರುತ್ತಿರಲಿಲ್ಲ. ಇದೇ ಕಾರಣದಿಂದಾಗಿ ಆಕೆ ಖಿನ್ನತೆಗೂ ಜಾರಿದ್ದಳು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!