ಅದಾರ್ ಪೂನಾವಾಲ 
ದೇಶ

ಅದಾರ್ ಪೂನಾವಾಲ ಹೆಸರಿನಲ್ಲಿ ಸೀರಂ ಸಂಸ್ಥೆಗೆ 1 ಕೋಟಿ ರೂ. ವಂಚನೆ, 7 ಮಂದಿ ಬಂಧನ

ಕೋವಿಡ್ ಲಸಿಕೆ ತಯಾರಕ ಕಂಪನಿ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ಗೆ ಅದರ ಸಿಇಒ ಅದಾರ್ ಪೂನಾವಾಲ ಅವರ ಹೆಸರಿನಲ್ಲಿ 1.01 ಕೋಟಿ ರೂ.ಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು...

ಪುಣೆ: ಕೋವಿಡ್ ಲಸಿಕೆ ತಯಾರಕ ಕಂಪನಿ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ಗೆ ಅದರ ಸಿಇಒ ಅದಾರ್ ಪೂನಾವಾಲ ಅವರ ಹೆಸರಿನಲ್ಲಿ 1.01 ಕೋಟಿ ರೂ.ಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪುಣೆ ಪೊಲೀಸರು ಶನಿವಾರ ತಿಳಿಸಿದ್ದಾರೆ.

ದೂರಿನ ಪ್ರಕಾರ, ಸೀರಂ ನಿರ್ದೇಶಕರಲ್ಲಿ ಒಬ್ಬರಾದ ಸತೀಶ್ ದೇಶಪಾಂಡೆ ಅವರು ಎಸ್‌ಐಐ ಸಿಇಒ ಅದಾರ್ ಪೂನಾವಾಲಾ ಎಂಬ ವ್ಯಕ್ತಿಯಿಂದ ವಾಟ್ಸಾಪ್‌ನಲ್ಲಿ ಸಂದೇಶ ಸ್ವೀಕರಿಸಿದ್ದಾರೆ ಮತ್ತು ಆ ಸಂದೇಶದಲ್ಲಿ ಸೂಚಿಸಿದಂತೆ ಸೆಪ್ಟೆಂಬರ್ 2022 ರಲ್ಲಿ ಏಳು ವಿವಿಧ ಖಾತೆಗಳಿಗೆ ಹಣವನ್ನು ಕಳುಹಿಸಿದ್ದಾರೆ. ನಂತರ ಆ ಸಂದೇಶ ಅದಾರ್ ಪೂನಾವಾಲಾ ಅವರಿಂದ ಬಂದಿದ್ದಲ್ಲ. ಅವರ ಹೆಸರಿನಲ್ಲಿ ಯಾರೋ ದುಷ್ಕರ್ಮಿಗಳು ನಕಲಿ ಸಂದೇಶ ಕಳುಹಿಸಿ ಕಂಪನಿಗೆ ವಂಚಿಸಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಬಂಡ್‌ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ವೇಳೆ ಪೊಲೀಸರು ಹಣ ವರ್ಗಾವಣೆ ಮಾಡಿರುವ ಎಂಟು ಖಾತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

"ಈಗ ದೇಶದ ವಿವಿಧ ಭಾಗಗಳಿಂದ ಬಂಧಿತರಾಗಿರುವ ಈ ಏಳು ಜನರ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಬಹಿರಂಗವಾಗಿದೆ. ಆದರೆ, ಪ್ರಮುಖ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ" ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸ್ಮಾರ್ತನ ಪಾಟೀಲ್ ಹೇಳಿದ್ದಾರೆ.

ಆರೋಪಿಗಳ ಎಲ್ಲಾ ಖಾತೆಗಳನ್ನು ಮತ್ತು 40 ಇತರ ಖಾತೆಗಳನ್ನು ಸಹ ಜಪ್ತಿ ಮಾಡಲಾಗಿದೆ. ಈ ಎಂಟು ಖಾತೆಗಳಿಂದ ಹಣವನ್ನು ಮತ್ತಷ್ಟು ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಖಾತೆಗಳಲ್ಲಿದ್ದ 13 ಲಕ್ಷ ರೂ.ಗಳನ್ನು ನಾವು ಸೀಜ್ ಮಾಡಿದ್ದೇವೆ ಎಂದು ಡಿಸಿಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!