ಪಂಜಾಬ್: ರೂಪ್ ನಗರ್ ಬಳಿ ರೈಲಿಗೆ ಸಿಲುಕಿ 3 ಮಕ್ಕಳು ಸಾವು
ಪ್ಯಾಸೆಂಜರ್ ರೈಲಿಗೆ ಸಿಲುಕಿ 3 ಮಕ್ಕಳು ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಶ್ರೀ ಕಿರತ್ಪುರ್ ಸಾಹಿಬ್ ಬಳಿ ನಡೆದಿದೆ.
ಚಂಡೀಗಢ: ಪ್ಯಾಸೆಂಜರ್ ರೈಲಿಗೆ ಸಿಲುಕಿ 3 ಮಕ್ಕಳು ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಶ್ರೀ ಕಿರತ್ಪುರ್ ಸಾಹಿಬ್ ಬಳಿ ನಡೆದಿದೆ.
ವಲಸೆ ಕಾರ್ಮಿಕರ ನಾಲ್ವರು ಮಕ್ಕಳು, ಸಟ್ಲಜ್ ನದಿಯ ರೈಲ್ವೆ ಟ್ರ್ಯಾಕ್ ಬಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಮೂರು ಮಕ್ಕಳು ಸಾವನ್ನಪ್ಪಿದ್ದರೆ, ನಾಲ್ಕನೆಯ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂತ್ರಸ್ತ ಮಕ್ಕಳು 7-11 ವಯಸ್ಸಿನವರಾಗಿದ್ದರು ಎಂದು ತಿಳಿದುಬಂದಿದೆ. ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. 4 ನೇ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆರ್ರಿ ಹಣ್ಣುಗಳನ್ನು ತಿನ್ನುವುದಕ್ಕಾಗಿ ಮಕ್ಕಳು ಇಲ್ಲಿಗೆ ಬಂದಿದ್ದರು. ಆದರೆ ರೈಲು ತಮ್ಮತ್ತ ಬರುತ್ತಿರುವುದು ಅವರಿಗೆ ಅರಿವಾಗಲಿಲ್ಲ ಎಂದು ಎಎಸ್ಐ ಜಿಆರ್ ಪಿ ಜಗ್ಜೀತ್ ಸಿಂಗ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.