ಲೈಂಗಿಕ ಕಿರುಕುಳ 
ದೇಶ

ಶಿಕ್ಷಕಿಗೆ "ಐ ಲವ್ ಯು" ಹೇಳಿ ಕಿರುಕುಳ: ವಿದ್ಯಾರ್ಥಿಗಳ ಬಂಧನ!

ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಡಿ ಹಾಗೂ ಐ ಲವ್ ಯು ಹೇಳಿ ಕಿರುಕುಳ ನೀಡುತ್ತಿದ್ದ ಆರೋಪದಡಿ ಮೂವರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮೀರಟ್: ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಡಿ ಹಾಗೂ ಐ ಲವ್ ಯು ಹೇಳಿ ಕಿರುಕುಳ ನೀಡುತ್ತಿದ್ದ ಆರೋಪದಡಿ ಮೂವರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮೀರಟ್ ನ ಕಿಥೋರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ತಾವು ಶಿಕ್ಷಕಿಗೆ ಕಿರುಕುಳ ನೀಡಿದ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಶಿಕ್ಷಕಿಯನ್ನು "ಜಾನ್" ಎಂದು ವಿದ್ಯಾರ್ಥಿಗಳು ಹೇಳುತ್ತಿರುವುದು ಹಾಗೂ ಐ ಲವ್ ಯು ಎಂದು ಹೇಳುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. 

ಪೊಲೀಸ್ ಅಧಿಕಾರಿಯೊಬ್ಬರ ಮಾಹಿತಿಯ ಪ್ರಕಾರ ಶಿಕ್ಷಕಿ (20) ಯೊಬ್ಬರು 12 ನೇ ತರಗತಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಕಳೆದ ಕೆಲವು ವಾರಗಳಿಂದ ತಮಗೆ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಶಾಲೆಗೆ ಬರುವಾಗ ಮನೆಗೆ ಹೊರಡುವಾಗ ವಿದ್ಯಾರ್ಥಿಗಳು ತಮ್ಮ ಬಗ್ಗೆ ಅಸಭ್ಯವಾಗಿ ಮಾತನಾಡುತ್ತಿದ್ದರು ಎಂದು ಶಿಕ್ಷಕಿ ಆರೋಪಿಸಿದ್ದಾರೆ. 

ಪೊಲೀಸರಿಗೆ ದೂರು ನೀಡುವುದಕ್ಕೂ ಮುನ್ನ ಶಿಕ್ಷಕಿ ವಿದ್ಯಾರ್ಥಿಗಳ ಪೋಷಕರಿಗೆ ದೂರು ನೀಡಿದ್ದರಂತೆ ಆದರೆ ಇದರಿಂದ ಯಾವುದೇ ಪ್ರಯೋಜನವೂ ಆಗಲಿಲ್ಲ. ಈಗ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT