ಗಾಯಗೊಂಡ ಕೆ.ಸಿ ವೇಣು ಗೋಪಾಲ್ 
ದೇಶ

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ: ಕಾಲ್ತುಳಿತದಲ್ಲಿ ವೇಣುಗೋಪಾಲ್ ಕೈಕಾಲಿಗೆ ಪೆಟ್ಟು

ಭಾರತ್ ಜೋಡೋ ಯಾತ್ರೆಯ ವೇಳೆ ಮಧ್ಯಪ್ರದೇಶದ ಇಂದೋರ್‌ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿದ್ದು ಗಾಯಗೊಂಡಿದ್ದಾರೆ.

ಭೋಪಾಲ್: ಭಾರತ್ ಜೋಡೋ ಯಾತ್ರೆಯ ವೇಳೆ ಮಧ್ಯಪ್ರದೇಶದ ಇಂದೋರ್‌ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿದ್ದು ಗಾಯಗೊಂಡಿದ್ದಾರೆ. ಕಾಲ್ತುಳಿತದಲ್ಲಿ ಸಿಲುಕಿದ ವೇಣುಗೋಪಾಲ್ ಕೈ ಮತ್ತು ಮೊಣಕಾಲಿಗೆ ಗಾಯಗಳಾಗಿವೆ.

ಮಧ್ಯಪ್ರದೇಶದ  ಇಂದೋರ್‌ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್‍ರನ್ನು ತಳ್ಳಿಕೊಂಡು ಅಭಿಮಾನಿಗಳು ನುಗ್ಗಿದ್ದಾರೆ. ಈ ವೇಳೆ ಬಿದ್ದ ವೇಣುಗೋಪಾಲ್ ಮೊಣಕಾಲು ಮತ್ತು ಕೈಗೆ ಗಾಯ ಮಾಡಿಕೊಂಡಿದ್ದಾರೆ.

ವರದಿಗಳ ಪ್ರಕಾರ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಉತ್ಸುಕರಾದ ಜನರು ಧಾವಿಸಿದ್ದರಿಂದ ಜನಸಂದಣಿ ಉಂಟಾಗಿದೆ. ಆದರೆ ಪೊಲೀಸರು ಗುಂಪನ್ನು ನಿಯಂತ್ರಿಸಲು ವಿಫಲರಾದರು. ಹೀಗಾಗಿ ಇದು ಕಾಲ್ತುಳಿತಕ್ಕೆ ಕಾರಣವಾಯಿತು.

ವೇಣುಗೋಪಾಲ್ ಅವರು ಭಾರತ್ ಜೋಡೋ ಯಾತ್ರೆಗಾಗಿ ಏರ್ಪಡಿಸಲಾಗಿದ್ದ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ