ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೆಹಲಿ ಏಮ್ಸ್ ಸರ್ವರ್ 6ನೇ ದಿನವೂ ಡೌನ್, 200 ಕೋಟಿ ರೂ. ಗೆ ಬೇಡಿಕೆ ಇಟ್ಟ ಹ್ಯಾಕರ್ಸ್

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ನ ಸರ್ವರ್ ಸತತ ಆರನೇ ದಿನವೂ ಡೌನ್ ಆಗಿದ್ದು, ಹ್ಯಾಕರ್‌ಗಳು ಅಂದಾಜು 200 ಕೋಟಿ ರೂಪಾಯಿ ಮೌಲ್ಯದ ಕ್ರಿಪ್ಟೋಕರೆನ್ಸಿಗೆ ಬೇಡಿಕೆ ಇಟ್ಟಿದ್ದಾರೆ...

ದೆಹಲಿಯ ಏಮ್ಸ್ ಆಸ್ಪತ್ರೆ
Lingaraj Badiger
Updated On : 29 Nov 2022, 6:29 pm

ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ನ ಸರ್ವರ್ ಸತತ ಆರನೇ ದಿನವೂ ಡೌನ್ ಆಗಿದ್ದು, ಹ್ಯಾಕರ್‌ಗಳು ಅಂದಾಜು 200 ಕೋಟಿ ರೂಪಾಯಿ ಮೌಲ್ಯದ ಕ್ರಿಪ್ಟೋಕರೆನ್ಸಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಬುಧವಾರ ಬೆಳಗ್ಗೆಯಿಂದಲೇ ಸರ್ವರ್ ಗಳು ಸ್ಥಗಿತಗೊಂಡಿದ್ದು, ತುರ್ತು, ಹೊರರೋಗಿ, ಒಳರೋಗಿ ಮತ್ತು ಪ್ರಯೋಗಾಲಯ ಸೇರಿದಂತೆ ಆಸ್ಪತ್ರೆಯ ಎಲ್ಲ ವಿಭಾಗಗಳನ್ನು ಕೈಯಾರೆ ನಿರ್ವಹಿಸಲಾಗುತ್ತಿದೆ.

ಇದನ್ನು ಓದಿ: ವೈದ್ಯರಿಗೆ ಮತ್ತು ಸಿಬ್ಬಂದಿಗೆ ಚಹಾ, ತಿಂಡಿ ತಂದುಕೊಡುವ ಸೇವೆ ಮಾಡದಂತೆ ಭದ್ರತಾ ಸಿಬ್ಬಂದಿಗೆ ಏಮ್ಸ್ ಆದೇಶ!

Advertisement

Advertisement

ಇಂಡಿಯಾ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್(CERT-IN), ದೆಹಲಿ ಪೊಲೀಸರು ಮತ್ತು ಗೃಹ ಸಚಿವಾಲಯದ ಪ್ರತಿನಿಧಿಗಳು ರಾಮ್ಸಮ್ವೇರ್ ದಾಳಿಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಸಂಬಂಧ ನವೆಂಬರ್ 25 ರಂದು ದೆಹಲಿ ಪೊಲೀಸ್‌ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ (IFSO)ಘಟಕ ಸುಲಿಗೆ ಮತ್ತು ಸೈಬರ್ ಭಯೋತ್ಪಾದನೆಯ ಪ್ರಕರಣವನ್ನು ದಾಖಲಿಸಿದೆ.

ತನಿಖಾ ಸಂಸ್ಥೆಗಳ ಶಿಫಾರಸ್ಸಿನ ಮೇರೆಗೆ ಆಸ್ಪತ್ರೆಯಲ್ಲಿನ ಕಂಪ್ಯೂಟರ್‌ಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

"ಹ್ಯಾಕರ್‌ಗಳು ಸುಮಾರು 200 ಕೋಟಿ ರೂಪಾಯಿ ಮೌಲ್ಯದ ಕ್ರಿಪ್ಟೋಕರೆನ್ಸಿಗೆ ಬೇಡಿಕೆ ಇಟ್ಟಿದ್ದಾರೆ" ಎಂದು ಮೂಲವೊಂದು ಪಿಟಿಐಗೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments