ಕಿರಣ್ ರಿಜಿಜು 
ದೇಶ

ಹೀಗಾಗಬಾರದಿತ್ತು: ಕೊಲಿಜಿಯಂ ಕುರಿತು ಕಾನೂನು ಸಚಿವ ಕಿರಣ್ ರಿಜಿಜು ಹೇಳಿಕೆ ಖಂಡಿಸಿದ ಸುಪ್ರೀಂ ಕೋರ್ಟ್

ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅದು ನಡೆಯಬಾರದಿತ್ತು ಎಂದು ಹೇಳಿದೆ.

ನವದೆಹಲಿ: ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅದು ನಡೆಯಬಾರದಿತ್ತು ಎಂದು ಹೇಳಿದೆ.

ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ(ಎನ್‌ಜೆಎಸಿ)ದ ಬಗ್ಗೆ ಅಸಮಾಧಾನ ಇದೆಯೇ? ಆದ್ದರಿಂದಲೇ ಶಿಫಾರಸು ಮಾಡಿದ ಹೆಸರುಗಳನ್ನು ತಡೆಹಿಡಿಯಲಾಗಿದೆಯೇ? ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾವನ್ನು ಪ್ರಶ್ನಿಸಿದೆ.

"ಉನ್ನತ ಸ್ಥಾನದಲ್ಲಿರುವ ಯಾರಾದರೂ ಹಾಗೆ ಹೇಳಿದಾಗ ... ಅದು ಆಗಬಾರದಿತ್ತು..." ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎ.ಎಸ್. ಓಕಾ ಅವರ ಪೀಠ ಹೇಳಿದೆ. ಒಂದು ಸಲ ಶಿಫಾರಸು ಮಾಡಿದ ಹೆಸರುಗಳನ್ನು ವಿಳಂಬವಿಲ್ಲದೆ ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಾನೂನು ಸಚಿವ ಕಿರಣ್ ರಿಜಿಜು ಅವರು ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರನ್ನು ನೇಮಕ ಮಾಡುವಲ್ಲಿ ಸರ್ಕಾರ ಹೆಚ್ಚಿನ ಅಧಿಕಾರವನ್ನು ಹೊಂದಿಲ್ಲದಿರುವ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು ಮತ್ತು ಕೊಲಿಜಿಯಂ ವ್ಯವಸ್ಥೆಯು ಸಂವಿಧಾನಕ್ಕೆ “ಅನ್ಯ” ಎಂದು ಪ್ರಸ್ತುತ ನೇಮಕಾತಿ ಕಾರ್ಯವಿಧಾನವನ್ನು ಟೀಕಿಸಿದ್ದರು.

“ದಯವಿಟ್ಟು ಇದನ್ನು ಪರಿಹರಿಸಿ ಮತ್ತು ಈ ವಿಷಯದಲ್ಲಿ ನ್ಯಾಯಾಂಗ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಮಾಡಬೇಡಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರದ ಪರವಾಗಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು  ‘ಕೆಲವೊಮ್ಮೆ ಮಾಧ್ಯಮ ವರದಿಗಳು ತಪ್ಪಾಗಿರುತ್ತವೆ’ ಎಂದು ಹೇಳಿದರು.

ಅಟಾರ್ನಿ ಜನರಲ್ ಅವರೇ, ನಾನು ಎಲ್ಲಾ ಪತ್ರಿಕಾ ವರದಿಗಳನ್ನು ನಿರ್ಲಕ್ಷಿಸಿದ್ದೇನೆ. ಆದರೆ ಇದು ಸಂದರ್ಶನವೊಂದರಲ್ಲಿ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಹೇಳಿದ್ದು. ನಾನು ಬೇರೆ ಏನನ್ನೂ ಹೇಳುತ್ತಿಲ್ಲ. ನಾವು ಮಾಡಬೇಕಾದರೆ, ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ನ್ಯಾಯಮೂರ್ತಿ ಕೌಲ್ ಅವರು ಆರ್ ವೆಂಕಟರಮಣಿ ಅವರಿಗೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel