ಮಲ್ಲಿಕಾರ್ಜುನ ಖರ್ಗೆ 
ದೇಶ

ಪ್ರಧಾನಿ ಮೋದಿಗೆ ರಾವಣನಂತೆ 100 ತಲೆಗಳಿವೆಯೇ?: ಮಲ್ಲಿಕಾರ್ಜುನ್ ಖರ್ಗೆ

ಗುಜರಾತ್ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಪ್ರಧಾನಿ ಮೋದಿ ತಮ್ಮ ಕೆಲಸವನ್ನು ಮರೆತು, ಕಾರ್ಪೊರೇಷನ್ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಪ್ರಚಾರ ಮಾಡುತ್ತಾರೆ ಮತ್ತು ತಮ್ಮ ಮುಖ ನೋಡಿ ಮತ ಹಾಕಿ ಎಂದು ಹೇಳುತ್ತೀರಾ. ಆದರೆ ನಾವು ನಿಮ್ಮ ಮುಖವನ್ನು ಎಷ್ಟು ಬಾರಿ ನೋಡಬೇಕು? ನಿಮಗೆ ಎಷ್ಟು ರೂಪಗಳಿವೆ? ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.

ನೀವು ಮೋದಿ ಹೆಸರಿನಲ್ಲಿ ಮತ ಕೇಳುವುದನ್ನು ನಾನು ನೋಡಿದ್ದೇನೆ, ಕಾರ್ಪೊರೇಷನ್ ಅಥವಾ ವಿಧಾನ ಸಭೆ ಚುನಾವಣೆಗಳಲ್ಲಿ ನಿಮ್ಮ ಅಭ್ಯರ್ಥಿಯ ಹೆಸರಿನಲ್ಲಿ ಮತ ಕೇಳಿ. ಮೋದಿ ಅವರು ಪುರಸಭೆಗೆ ಬಂದು ಕೆಲಸ ಮಾಡುತ್ತಾರೆಯೇ? ನಿಮ್ಮ ಕಷ್ಟದ ಸಮಯದಲ್ಲಿ ಅವರು ನಿಮಗೆ ಸಹಾಯ ಮಾಡುತ್ತಾರೆಯೇ? ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಖರ್ಗೆ ಅವರ "ರಾವಣ" ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ಯಾವುದೇ ಅಭಿವೃದ್ಧಿ ಅಜೆಂಡಾ ಮತ್ತು ಜನರ ಬೆಂಬಲವಿಲ್ಲದೆ, ಕಾಂಗ್ರೆಸ್ ಗುಜರಾತ್ ಮತ್ತು ಗುಜರಾತಿಗಳನ್ನು ನಿಂದಿಸಲು ಹೊರಟಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಜಿ ವಿರುದ್ಧ ಖರ್ಗೆ ಅವರು ನೀಡಿದ ಹೇಳಿಕೆ ಸಾಕ್ಷಿಯಾಗಿದೆ. ಗುಜರಾತಿಗಳ ಮೇಲಿನ ಅವರ ದ್ವೇಷಕ್ಕೆ ಇದು ಸಾಕ್ಷಿ. ಗುಜರಾತ್‌ನ ಜನರು ಈ ಬಾರಿಯೂ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ಗುಜರಾತ್‌ನಲ್ಲಿ 182 ಸದಸ್ಯ ಬಲದ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್