ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ 
ದೇಶ

ಎಐಸಿಸಿ ಅಧ್ಯಕ್ಷ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಜಿ23 ಗುಂಪಿನ ನಾಯಕರು ಸೇರಿದಂತೆ ಘಟಾನುಘಟಿಗಳ ಬೆಂಬಲ; ಖರ್ಗೆ ಆಯ್ಕೆ ಹಾದಿ ಸಲೀಸು!

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸುವ ಮೂಲಕ ಅಧ್ಯಕ್ಷೀಯ ಚುನಾವಣೆ ಮತ್ತೊಂದು ತಿರುವು ಪಡೆದುಕೊಂಡಿದೆ.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸುವ ಮೂಲಕ ಅಧ್ಯಕ್ಷೀಯ ಚುನಾವಣೆ ಮತ್ತೊಂದು ತಿರುವು ಪಡೆದುಕೊಂಡಿದೆ.

80 ವರ್ಷದ ಹಿರಿಯ ನಾಯಕರಾಗಿರುವ ಖರ್ಗೆ ಅವರಿಗೆ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ನ ಹಲವು ನಾಯಕರ ಬೆಂಬಲವಿದೆ. ಜಿ 23 ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಹಲವು ನಾಯಕರು ಇದುವರೆಗೂ ಶಶಿ ತರೂರ್ ಅವರ ಜೊತೆಗಿದ್ದರು. ಆದರೆ ಖರ್ಗೆ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಾರೆ ಎಂದು ತಿಳಿದ ಮೇಲೆ ತರೂರ್ ಅವರನ್ನು ತೊರೆದು ಖರ್ಗೆ ಬೆಂಬಲಕ್ಕೆ ನಿಂತಿದ್ದಾರೆ. ಭೂಪಿಂದರ್ ಸಿಂಗ್ ಹೂಡಾ, ಆನಂದ್ ಶರ್ಮಾ, ಪೃಥ್ವಿರಾಜ್ ಚವಾಣ್ ಮತ್ತು ಮನೀಶ್ ತಿವಾರಿ ಅವರು ಖರ್ಗೆ ಅವರ ನಾಮಪತ್ರಕ್ಕೆ ಸಹಿ ಮಾಡಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ನನ್ನ ಬೆಂಬಲಕ್ಕೆ ಬಂದ ಎಲ್ಲಾ ನಾಯಕರು, ಕಾರ್ಯಕರ್ತರು, ಪ್ರತಿನಿಧಿಗಳು ಮತ್ತು ಸಚಿವರು ಬಂದು ನನ್ನನ್ನು ಪ್ರೋತ್ಸಾಹಿಸಿದರು, ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅಕ್ಟೋಬರ್ 17 ರಂದು ಫಲಿತಾಂಶಗಳು ಏನೆಂದು ನಾವು ನೋಡುತ್ತೇವೆ. ನಾನು ಗೆಲ್ಲುವ ಭರವಸೆ ಇದೆ ಎಂದರು. ನಾನು ಬಾಲ್ಯದಿಂದಲೂ ಕಾಂಗ್ರೆಸ್ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿದ್ದೇನೆ, ನಾನು 8, 9 ನೇ ತರಗತಿಯಲ್ಲಿದ್ದಾಗ ಗಾಂಧಿ, ನೆಹರು ಸಿದ್ಧಾಂತದ ಪ್ರಚಾರ ಮಾಡುತ್ತಿದ್ದೆ  ಎಂದರು.

ಖರ್ಗೆ ಅವರ ಹೆಸರನ್ನು ಒಟ್ಟು 30 ಕಾಂಗ್ರೆಸ್ ನಾಯಕರು ಪ್ರಸ್ತಾಪಿಸಿದ್ದಾರೆ. ಜಿ-23 ಗುಂಪಿನ ನಾಯಕ ಮನೀಶ್ ತಿವಾರಿ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಖರ್ಗೆ ಅವರಿಗೆ ಬೆಂಬಲ ನೀಡಿದ್ದಾರೆ. ಪಕ್ಷಕ್ಕೆ ಅಧಿಕೃತ ಅಭ್ಯರ್ಥಿ ಇಲ್ಲ, ಗಾಂಧಿ ಕುಟುಂಬ ಈ ರೇಸ್‌ನಲ್ಲಿ ತಟಸ್ಥವಾಗಿತ್ತು.

ಖರ್ಗೆ ಹೆಸರನ್ನು ಘೋಷಿಸಿದ ನಂತರ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಹಿಂದೆ ಸರಿದಿದ್ದಾರೆ.  ಇದರಿಂದ ಖರ್ಗೆ ಅವರಿಗೆ ಪಕ್ಷದ ನಾಯಕತ್ವದ ಬೆಂಬಲವಿದೆ ಎಂಬುದು ಸ್ಪಷ್ಟವಾಯಿತು. ದಿಗ್ವಿಜಯ್ ಸಿಂಗ್  ಅವರು ಖರ್ಗೆ ಅವರ ನಾಮಪತ್ರಕ್ಕೆ ಸಹಿ ಮಾಡಿ ಎಐಸಿಸಿ ಕಚೇರಿಗೆ ತೆರಳಿದರು.

ಒಬ್ಬ ವ್ಯಕ್ತಿ-ಒಂದು ಹುದ್ದೆ ಎಂಬ ಪಕ್ಷದ ನಿಯಮಕ್ಕೆ ಅನುಗುಣವಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಖರ್ಗೆ ಶೀಘ್ರದಲ್ಲೇ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ನಾಯಕತ್ವದ ವಿರುದ್ಧದ ಬಂಡಾಯವನ್ನು ನಿಯಂತ್ರಿಸಲು ವಿಫಲವಾದ ಹಿನ್ನೆಲೆಯಲ್ಲಿ ಅಶೋಕ್ ಗೆಹ್ಲೋಟ್ ಸಿಎಂ ಆಗಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುದನ್ನು ಸೋನಿಯಾಗಾಂಧಿ ನಿರ್ಧರಿಸಲಿದ್ದಾರೆ. ಪಕ್ಷದ ಮತದಾರರಿಗೆ ಸಂದೇಶ ನೀಡಿರುವ ಶಶಿ ತರೂರ್, "ನಿಮಗೆ ಯಥಾಸ್ಥಿತಿ ಬೇಕಾದರೆ ಖರ್ಗೆ ಜೊತೆ ಹೋಗಿ, ಬದಲಾವಣೆ ಬೇಕಿದ್ದರೆ ನನ್ನ ಜೊತೆ ಬನ್ನಿ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT