ನಾಮಪತ್ರ ಸಲ್ಲಿಸಿದ ಖರ್ಗೆ ಮತ್ತು ತರೂರ್ 
ದೇಶ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ತ್ರಿಪಾಠಿ ನಾಮಪತ್ರ ತಿರಸ್ಕೃತ; ಈಗ ಖರ್ಗೆ Vs ತರೂರ್

ರಾಜಕೀಯ ವಲಯದಲ್ಲಿ ತೀವ್ರ ಕೂತುಹಲ ಮೂಡಿಸಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಜಾರ್ಖಂಡ್‌ನ ಮಾಜಿ ಸಚಿವ ಕೆಎನ್ ತ್ರಿಪಾಠಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕೆ ಸಲ್ಲಿಸಿದ್ದ ನಾಮಪತ್ರವನ್ನು...

ನವದೆಹಲಿ: ರಾಜಕೀಯ ವಲಯದಲ್ಲಿ ತೀವ್ರ ಕೂತುಹಲ ಮೂಡಿಸಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಜಾರ್ಖಂಡ್‌ನ ಮಾಜಿ ಸಚಿವ ಕೆಎನ್ ತ್ರಿಪಾಠಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕೆ ಸಲ್ಲಿಸಿದ್ದ ನಾಮಪತ್ರವನ್ನು ಶನಿವಾರ ತಿರಸ್ಕರಿಸಲಾಗಿದೆ. ಇದರೊಂದಿಗೆ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಪೈಪೋಟಿ ಏರ್ಪಟ್ಟಿದೆ.

ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಶುಕ್ರವಾರ ಈ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

ನಾಮಪತ್ರ ಪರಿಶೀಲನೆ ಬಳಿಕ ಇಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು, ಮೂವರು ಅಭ್ಯರ್ಥಿಗಳು ಒಟ್ಟು 20 ಫಾರ್ಮ್ ಗಳನ್ನು ಸಲ್ಲಿಸಿದ್ದರು. ಅವುಗಳಲ್ಲಿ ನಾಲ್ಕು ತಿರಸ್ಕೃತವಾಗಿವೆ ಎಂದರು.

ಖರ್ಗೆ ಅವರು 14 ಫಾರ್ಮ್ ಗಳನ್ನು ಸಲ್ಲಿಸಿದರೆ, ತರೂರ್ ಅವರು ಐದು ಮತ್ತು ತ್ರಿಪಾಠಿ ಅವರು ಕೇವಲ ಒಂದು ಫಾರ್ಮ್ ಸಲ್ಲಿಸಿದ್ದರು. ಅದು ಸಹ ತಿರಸ್ಕೃತವಾಗಿದೆ ಎಂದಿದ್ದಾರೆ.

ತ್ರಿಪಾಠಿ ಅವರಿಗೆ ಪ್ರತಿಪಾದಕರಾಗಿ ಮಾಡಿದ್ದ ಒಬ್ಬರ ಸಹಿ ಹೊಂದಿಕೆಯಾಗದ ಕಾರಣ ಮತ್ತು ಇನ್ನೊಬ್ಬ ಪ್ರತಿಪಾದಕರ ಸಹಿ ಪುನರಾವರ್ತನೆಯಾದ ಕಾರಣ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಮಿಸ್ತ್ರಿ ತಿಳಿಸಿದ್ದಾರೆ.

ಮಲಿಕಾರ್ಜುನ್ ಖರ್ಗೆ ಮತ್ತು ಶಶಿ ತರೂರ್ ಅವರು ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನಾಂಕವಾಗಿದೆ. ಆ ದಿನ ಚಿತ್ರಣ ಸ್ಪಷ್ಟವಾಗುತ್ತದೆ. ಯಾರೂ ನಾಮಪತ್ರ ಹಿಂತೆಗೆದುಕೊಳ್ಳದಿದ್ದರೆ ಮತದಾನ ಪ್ರಕ್ರಿಯೆ ನಡೆಯುತ್ತದೆ ಎಂದು ಮಿಸ್ತ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT