ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ 2022 
ದೇಶ

ಸ್ವಚ್ಛ ಸರ್ವೇಕ್ಷಣೆ 2022 ಪ್ರಶಸ್ತಿ  ಪ್ರಕಟ: ಇಂದೋರ್‌ ಸ್ವಚ್ಛ ನಗರ, ಮಧ್ಯಪ್ರದೇಶ ಸ್ವಚ್ಛ ರಾಜ್ಯ

ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸರ್ವೇಕ್ಷಣೆಯ ಫಲಿತಾಂಶ ಪ್ರಕಟವಾಗಿದ್ದು, ದೇಶದ ಸ್ವಚ್ಛ ನಗರ ಎಂಬ ಮಧ್ಯಪ್ರದೇಶ ಇಂದೋರ್‌ ಪಾತ್ರವಾಗಿದೆ.

ನವದೆಹಲಿ: ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸರ್ವೇಕ್ಷಣೆಯ ಫಲಿತಾಂಶ ಪ್ರಕಟವಾಗಿದ್ದು, ದೇಶದ ಸ್ವಚ್ಛ ನಗರ ಎಂಬ ಮಧ್ಯಪ್ರದೇಶ ಇಂದೋರ್‌ ಪಾತ್ರವಾಗಿದೆ.

ಹೌದು.. ದೇಶದ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಮಧ್ಯಪ್ರದೇಶ ಇಂದೋರ್‌ ಸತತ ಆರನೇ ಬಾರಿಗೆ ಪಾತ್ರವಾಗಿದೆ. ನಂತರದ ಎರಡು ಸ್ಥಾನಗಳಲ್ಲಿ ಅನುಕ್ರಮವಾಗಿ ರಾಜಸ್ಥಾನದ ಸೂರತ್‌ ಮತ್ತು ಮಹಾರಾಷ್ಟ್ರದ ನವಿ ಮುಂಬೈ ನಗರಗಳು ಇವೆ. ಕರ್ನಾಟಕದ ಮೈಸೂರು ಜಿಲ್ಲೆ ಟಾಪ್ 10 ಸ್ವಚ್ಛ ನಗರಗಳಲ್ಲಿರುವ ಕರ್ನಾಟಕದ ನಗರವಾಗಿದೆ. ಮೈಸೂರು ಪಟ್ಟಿಯಲ್ಲಿ 8ನೇ ಸ್ಥಾನವನ್ನು ಪಡೆದಿದೆ.

‘ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ 2022’ರ ಉತ್ತಮ ಪ್ರದರ್ಶನ ತೋರಿದ ರಾಜ್ಯಗಳ ವಿಭಾಗದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನ ಪಡೆದಿದೆ. ನಂತರದ ಸ್ಥಾನಗಳಲ್ಲಿ ಛತ್ತೀಸಗಢ ಮತ್ತು ಮಹಾರಾಷ್ಟ್ರ ರಾಜ್ಯಗಳು ಇವೆ.  100ಕ್ಕಿಂತ ಕಡಿಮೆ ಸ್ಥಳೀಯ ಸಂಸ್ಥೆಗಳನ್ನು ಹೊಂದಿರುವ ಸ್ವಚ್ಛ ರಾಜ್ಯಗಳ ಪಟ್ಟಿಯಲ್ಲಿ ತ್ರಿಪುರಾ ಪ್ರಥಮ ಸ್ಥಾನ ಪಡೆದಿದೆ.  1 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ಮಹಾರಾಷ್ಟ್ರದ ಪಂಚಗಣಿ ಮೊದಲ ಸ್ಥಾನ ಪಡೆದರೆ, ನಂತರದ ಸ್ಥಾನವನ್ನು ಛತ್ತೀಸಗಢದ ಪಟಾನ್‌ ಪಡೆದಿದೆ. ಗಂಗಾ ತೀರದ ಸ್ವಚ್ಛನಗರ ಎಂಬ ಹೆಗ್ಗಳಿಕೆಗೆ ಹರಿದ್ವಾರ ಪಾತ್ರವಾಗಿದೆ. 

ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಸ್ವಚ್ಛತೆಗೆ ಸಂಬಂಧಿಸಿದ ಆರು ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವಚ್ಛ ಭಾರತ ದಿವಸದ ಅಂಗವಾಗಿ ಭಾನುವಾರ ಪ್ರದಾನ ಮಾಡಲಿದ್ದಾರೆ.  ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹರ್ದೀಪ್‌ ಸಿಂಗ್‌ ಪುರಿ ಅವರು ಈ ವೇಳೆ ಉಪಸ್ಥಿತರಿದ್ದರು.

ಮುರ್ಮು ಅವರಿಂದ 6 ಪ್ರಶಸ್ತಿಗಳ ಪ್ರದಾನ 
ಗಾಂಧಿ ಜಯಂತಿಯಂದೇ ಸ್ವಚ್ಛ ಭಾರತ ದಿವಸ ಆಚರಣೆ ಮಾಡಲಾಗುತ್ತದೆ. ಸ್ವಚ್ಛ ಸರ್ವೇಕ್ಷಣೆ ಗ್ರಾಮೀಣ–2022, ಸ್ವಚ್ಛತಾ ಹಿ ಸೇವಾ, ಸುಜ್ಲಮ್‌ 1.0 ಮತ್ತು 2.0, ಜಲ್‌ ಜೀವನ ಮಿಶನ್‌ ಕಾರ್ಯನಿರ್ವಹಣೆ ಮೌಲ್ಯಮಾಪನ, ಹರ್ ಘರ್‌ ಜಲ್‌ ಪ್ರಮಾಣೀಕರಣ, ಸ್ಟಾರ್ಟ್‌ ಅಪ್‌ ಗ್ರ್ಯಾಂಡ್‌ ಚಾಲೆಂಜ್‌ ಪ್ರಶಸ್ತಿಗಳನ್ನು ಮುರ್ಮು ಅವರು ಪ್ರದಾನ ಮಾಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT