ಪ್ರತ್ಯಕ್ಷ ದೃಶ್ಯ 
ದೇಶ

ಮಧ್ಯಪ್ರದೇಶ: ನವರಾತ್ರಿ ಆಚರಣೆ ವೇಳೆ ದೊಣ್ಣೆ ಹಿಡಿದು ಎರಡು ಸಮುದಾಯಗಳಿಂದ ಭಾರೀ ಹೊಡೆದಾಟ!

ನವರಾತ್ರಿ ಆಚರಣೆಯ ಕುರಿತು ಮಧ್ಯಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಕೋಲುಗಳಿಂದ ಹೊಡೆದಾಟ ನಡೆದಿದ್ದು, ಗಲಾಟೆ ವಿಡಿಯೋ ವೈರಲ್ ಆಗಿದೆ.

ಭೋಪಾಲ್: ನವರಾತ್ರಿ ಆಚರಣೆಯ ಕುರಿತು ಮಧ್ಯಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಕೋಲುಗಳಿಂದ ಹೊಡೆದಾಟ ನಡೆದಿದ್ದು, ಗಲಾಟೆ ವಿಡಿಯೋ ವೈರಲ್ ಆಗಿದೆ.

ಪೊಲೀಸರ ಪ್ರಕಾರ, ಭೋಪಾಲ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಅಗರ್ ಜಿಲ್ಲೆಯ ಕಂಕರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುರ್ಗಾ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪಿಸಿದ ಕಾರಣಕ್ಕೆ ಮೇಲ್ಜಾತಿಯವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮದ ದಲಿತ ಸಮುದಾಯದ ಸದಸ್ಯರು ಹೇಳುತ್ತಾರೆ.

ಗರ್ಭಾ ಫಂಕ್ಷನ್‌ಗಾಗಿ ಇಬ್ಬರು ಹುಡುಗಿಯರು ಮಾಡಿದ ಅಶ್ಲೀಲ ನೃತ್ಯದ ಬಗ್ಗೆ ಜಗಳ ಆರಂಭವಾಯಿತು ಎಂದು ಇನ್ನೊಂದು ಕಡೆ ಆರೋಪ ಕೇಳಿಬರುತ್ತಿದೆ.

ಒಂದು ಹಾಡು-ನೃತ್ಯ ಕಾರ್ಯಕ್ರಮದ ಬಗೆಗಿನ ವಿವಾದವು  ಜಗಳಕ್ಕೆ ಕಾರಣವಾಯಿತು. ನಾವು ಎರಡೂ ಕಡೆಯಿಂದ ದೂರುಗಳನ್ನು ದಾಖಲಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನವಲ್ ಸಿಂಗ್ ಸಿಸೋಡಿಯಾ ಹೇಳಿದ್ದಾರೆ.

ವ್ಯಾಪಕವಾಗಿ ಹಂಚಿಕೊಂಡಿರುವ ವಿಡಿಯೋಗಳಲ್ಲಿ ಗಲಾಟೆ ವೇಳೆ ದೊಡ್ಡ ದೊಡ್ಡ ಕೋಲುಗಳನ್ನು ಬಳಸಲಾಗಿದೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ' ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT