ಮುಲಾಯಂ ಸಿಂಗ್ ಯಾದವ್ 
ದೇಶ

ಎಸ್ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ, ಗುರುಗ್ರಾಮ್ ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ "ಗಂಭೀರ"ವಾಗಿದ್ದು, ಅವರನ್ನು ಹರಿಯಾಣದ ಗುರುಗ್ರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ...

ಗುರುಗ್ರಾಮ್: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ "ಗಂಭೀರ"ವಾಗಿದ್ದು, ಅವರನ್ನು ಹರಿಯಾಣದ ಗುರುಗ್ರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಧ್ಯಮ ವರದಿಗಳ ಪ್ರಕಾರ, ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಐಸಿಯು ವಾರ್ಡ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಯಾದವ್ ಅವರು ಕೆಲವು ತಿಂಗಳುಗಳಿಂದ ಹಲವಾರು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರ ಸ್ಥಿತಿ ಇಂದು ಗಂಭೀರವಾಗಿದೆ ಎಂದು ವಿವರಿಸಲಾಗಿದೆ.

ಎಸ್‌ಪಿ ವರಿಷ್ಠರ ಪುತ್ರ ಅಖಿಲೇಶ್ ಯಾದವ್ ಅವರು ತಮ್ಮ ತಂದೆಯ ಪಕ್ಕದಲ್ಲಿರಲು ದೆಹಲಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಶಿವಪಾಲ್ ಯಾದವ್ ಅವರು ಪ್ರಸ್ತುತ ದೆಹಲಿಯಲ್ಲಿದ್ದಾರೆ. ಇಂದು ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಲು ಗುರುಗ್ರಾಮ್‌ಗೆ ತೆರಳುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ