ದೇಶ

ಜಮ್ಮು ಕಾಶ್ಮೀರದ ಉನ್ನತಾಧಿಕಾರಿ ಭೀಕರ ಕೊಲೆ! ಮನೆ ಕೆಲಸದವನ ಮೇಲೆ ಶಂಕೆ

Shilpa D

ಜಮ್ಮು: ಜಮ್ಮು ಕಾರಾಗೃಹ ಇಲಾಖೆ ಉನ್ನತಾಧಿಕಾರಿ ಎಚ್ ಕೆ ಲೋಹಿಯಾ ಅವರು ಸೋಮವಾರ ಜಮ್ಮುವಿನಲ್ಲಿ ಅನುಮಾನಾಸ್ಪದವಾಗಿ ಕೊಲೆಯಾಗಿದ್ದಾರೆ. ಅವರ ಮನೆಯ ಸಹಾಯಕನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮನೆ ಸಹಾಯಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಆರಂಭಿಸಲಾಗಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ. 1992ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ನೆಲೆಸಿದ್ದರು. ಅಲ್ಲಿಯೇ ಅವರ ಕತ್ತು ಸೀಳಿ ಕೊಲೆ ಮಾಡಲಾಗಿದೆ.


ಮೃತದೇಹ ಕತ್ತು ಸೀಳಿದ ಮತ್ತು ಸುಟ್ಟು ಗಾಯಗಳ ಸ್ಥಿತಿಯಲ್ಲಿ ಜಮ್ಮುವಿನ ಹೊರವಲಯದಲ್ಲಿರುವ ಅವರ ನಿವಾಸದಲ್ಲಿ ಪತ್ತೆಯಾಗಿದ್ದು, ಲೋಹಿಯಾ ಅವರ ಮನೆಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯಾಸಿರ್​ನನ್ನು ಪ್ರಮುಖ ಆರೋಪಿ ಎಂದು ಶಂಕಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.

ಅವರನ್ನು ಆಗಸ್ಟ್‌ನಲ್ಲಿ ಕಾರಾಗೃಹ ಇಲಾಖೆಯ ಉನ್ನತಾಧಿಕಾರಿಯಾಗಿ ನಿಯೋಜಿಸಲಾಗಿತ್ತು. 'ಅಧಿಕಾರಿಯೊಂದಿಗೆ ಇದ್ದ ಗೃಹ ಸಹಾಯಕ ತಲೆಮರೆಸಿಕೊಂಡಿದ್ದಾನೆ. ಅತನಿಗಾಗಿ ಹುಡುಕಾಟ ಪ್ರಾರಂಭವಾಗಿದೆ' ಎಂದು ಎಡಿಜಿಪಿ ಹೇಳಿದ್ದಾರೆ. ವಿಧಿವಿಜ್ಞಾನ ಮತ್ತು ಅಪರಾಧ ತಂಡಗಳು ಸ್ಥಳಕ್ಕೆ ಧಾವಿಸಿವೆ. ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿ ಸಾವಿಗೆ ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆ ತೀವ್ರ ಬೇಸರ ವ್ಯಕ್ತಪಡಿಸಿದೆ.

SCROLL FOR NEXT