ಐಸಿಯುನಲ್ಲಿ ಮುಲಾಯಂ ಸಿಂಗ್ ಯಾದವ್, ಆರೋಗ್ಯ ಪರಿಸ್ಥಿತಿ ಗಂಭೀರ- ಆಸ್ಪತ್ರೆ ಹೇಳಿಕೆ
ಸಮಾಜವಾದಿ ಪಕ್ಷ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಇಲ್ಲಿನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಗುರುವಾರ ಹೇಳಿದೆ.
ಗುರುಗ್ರಾಮ: ಸಮಾಜವಾದಿ ಪಕ್ಷ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಇಲ್ಲಿನ ಮೇದಾಂತ ಆಸ್ಪತ್ರೆಯ ಇನ್ನೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಗುರುವಾರ ಹೇಳಿದೆ.
82 ವರ್ಷದ ಮುಲಾಯಂ ಸಿಂಗ್ ಯಾದವ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದ್ದು, ಅವರಿಗೆ ಸಮಗ್ರ ತಜ್ಞರ ತಂಡದಿಂದ ಜೀವ ರಕ್ಷಕ ಔಷಧಗಳನ್ನು ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ. ಮುಲಾಯಂ ಸಿಂಗ್ ಯಾದವ್ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.