ದೇಶ

ಮುಂಬೈ ವಿಮಾನ ನಿಲ್ದಾಣದಲ್ಲಿ 100 ಕೋಟಿ ರೂ. ಮೌಲ್ಯದ ಹೆರಾಯಿನ್ ಜಪ್ತಿ, ಇಬ್ಬರ ಬಂಧನ

Lingaraj Badiger

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ ಐ) ಮುಂಬೈ ವಿಮಾನ ನಿಲ್ದಾಣದಲ್ಲಿ 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ 16 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದೆ ಮತ್ತು ಈ ಸಂಬಂಧ ಘಾನಾದ ಒಬ್ಬ ಪುರುಷ ಮತ್ತು ಮಹಿಳೆಯನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಪ್ರಕರಣದಲ್ಲಿ ಡಿಆರ್‌ಐನ ಮುಂದಿನ ಕ್ರಮದ ಭಾಗವಾಗಿ ಘಾನಾದ ಮಹಿಳೆಯನ್ನು ದೆಹಲಿಯ ಹೋಟೆಲ್‌ನಿಂದ ಬಂಧಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಆಫ್ರಿಕನ್ ರಾಷ್ಟ್ರವಾದ ಮಲಾವಿಯಿಂದ ಕತಾರ್ ಮೂಲಕ ಮುಂಬೈಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಮಾದಕ ದ್ರವ್ಯಗಳನ್ನು ದೇಶಕ್ಕೆ ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ನಿರ್ದಿಷ್ಟ ಸುಳಿವಿನ ಮೇರೆಗೆ ಡಿಆರ್‌ಐ ಮುಂಬೈ ಘಟಕ ಮಂಗಳವಾರ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ಶೋಧ ನಡೆಸಿತು ಅವರು ಹೇಳಿದ್ದಾರೆ.

ಡಿಆರ್‌ಐ ಅಧಿಕಾರಿಗಳ ಶೋಧದ ವೇಳೆ ಟ್ರಾಲಿ ಬ್ಯಾಗ್‌ಗಳಲ್ಲಿ ಬಚ್ಚಿಟ್ಟಿದ್ದ 16 ಕೆಜಿ ಹೆರಾಯಿನ್‌ ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಶಪಡಿಸಿಕೊಳ್ಳಲಾದ ಹೆರಾಯಿನ್‌ನ ಮೌಲ್ಯವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 100 ಕೋಟಿ ರೂ.ಗೂ ಹೆಚ್ಚು ಎಂದು ಅವರು ಹೇಳಿದ್ದಾರೆ. 

ಹೆರಾಯಿನ್ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದು, ಸ್ಥಳೀಯ ನ್ಯಾಯಾಲಯ ಡಿಆರ್‌ಐ ಕಸ್ಟಡಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT