ವಿಜಯ್ ನಾಯರ್ 
ದೇಶ

ದೆಹಲಿ ಮದ್ಯ ನೀತಿ ಪ್ರಕರಣ: ಆಮ್ ಆದ್ಮಿ ಪಕ್ಷದ ಮುಖಂಡ ವಿಜಯ್ ನಾಯರ್ ಇಡಿ ವಶ?

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಸಂವಹನ ಉಸ್ತುವಾರಿ ವಿಜಯ್ ನಾಯರ್ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ತೆಗೆದುಕೊಳ್ಳಲಿದೆ. ನಾಯರ್ ಅವರನ್ನು ಈ ಹಿಂದೆ ಸಿಬಿಐ ಬಂಧಿಸಿತ್ತು ಮತ್ತು ಗುರುವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಸಂವಹನ ಉಸ್ತುವಾರಿ ವಿಜಯ್ ನಾಯರ್ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ತೆಗೆದುಕೊಳ್ಳಲಿದೆ. ನಾಯರ್ ಅವರನ್ನು ಈ ಹಿಂದೆ ಸಿಬಿಐ ಬಂಧಿಸಿತ್ತು ಮತ್ತು ಗುರುವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಉದ್ಯಮಿ ಮತ್ತು ಎಎಪಿ ಸಂವಹನ ಉಸ್ತುವಾರಿ ವಿಜಯ್ ನಾಯರ್ ಅವರನ್ನು ವಿಶೇಷ ನ್ಯಾಯಾಲಯ ಗುರುವಾರ ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಇದೀಗ ಇಡಿ ಕೂಡ ಆತನ ಕಸ್ಟಡಿಗೆ ಕೋರಲು ಮುಂದಾಗಿದೆ. ಸಮೀರ್ ಮಹೇಂದ್ರು ಈಗಾಗಲೇ ಇಡಿ ವಶದಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಂದು ದೆಹಲಿ, ಪಂಜಾಬ್ ಮತ್ತು ಹೈದರಾಬಾದ್‌ನ 35 ಸ್ಥಳಗಳಲ್ಲಿ ಶೋಧ ನಡೆಸಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ವಿಜಯ್ ನಾಯರ್ ಅವರನ್ನು ಸೆಪ್ಟೆಂಬರ್ 27 ರಂದು ಸಿಬಿಐ ಬಂಧಿಸಿದ್ದು, ಇದರಲ್ಲಿ ಮನೀಶ್ ಸಿಸೋಡಿಯಾ ಕೂಡ ಆರೋಪಿಯಾಗಿದ್ದಾರೆ. ನಾಯರ್ ಪ್ರಮುಖ ಸಂಚುಕೋರರಲ್ಲಿ ಒಬ್ಬರಾಗಿದ್ದು, ಮದ್ಯದ ಪರವಾನಗಿ ಹಂಚಿಕೆಯಲ್ಲಿನ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭ್ರಷ್ಟಾಚಾರ ಪ್ರಕರಣದಲ್ಲಿ ವಿಜಯ್ ನಾಯರ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ಏಳು ದಿನಗಳ ಬಂಧನವನ್ನು ಕೋರಿತ್ತು.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಆರೋಪಿ ಸಾರ್ವಜನಿಕ ಸೇವಕರು ಮತ್ತು ಇತರ ಹೆಸರಿಸದ ವ್ಯಕ್ತಿಗಳ ವಿರುದ್ಧ ಐಪಿಸಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!