ದೇಶ

ಸಿಬಿಐ ನಂತರ ಇಡಿ ದಾಳಿ ನಡೆಸುವ ಸಾಧ್ಯತೆ ಇದೆ: ತೇಜಸ್ವಿ ಯಾದವ್

Lingaraj Badiger

ಪಾಟ್ನಾ: ಸಿಬಿಐ ಸಲ್ಲಿಸಿದ ಹೊಸ ಚಾರ್ಜ್ ಶೀಟ್‌ ನಲ್ಲಿ ಲಾಲು ಪ್ರಸಾದ್ ಮತ್ತು ರಾಬ್ರಿ ದೇವಿ ಅವರ ಹೆಸರಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬಿಹಾರ ಡಿಸಿಎಂ ಮತ್ತು ಲಾಲು ಪುತ್ರ ತೇಜಸ್ವಿ ಯಾದವ್ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದ್ದಕ್ಕೆ 'ಮಹಾಘಟಬಂಧನ್' ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಶನಿವಾರ ಹೇಳಿದ್ದಾರೆ.

ಈ ಹಿಂದೆ ಕೇಂದ್ರ ತನಿಖಾ ಸಂಸ್ಥೆಗಳು ತಮ್ಮ ನಿವಾಸದಲ್ಲಿಯೇ ಕಚೇರಿಗಳನ್ನು ತೆರೆಯಲಿ ಎಂದು ಅಪಹಾಸ್ಯ ಮಾಡಿದ್ದ ಆರ್‌ಜೆಡಿ ನಾಯಕ, ಸಿಬಿಐ ದಾಳಿ ನಂತರ, ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದರು.

"ಬಿಹಾರದಲ್ಲಿ ಅಧಿಕಾರ ಕಳೆದುಕೊಂಡಿರುವ ಬಿಜೆಪಿಯು ನಿಸ್ಸಂಶಯವಾಗಿ ನಮ್ಮೊಂದಿಗೆ ಸಮಸ್ಯೆ ಎದುರಿಸುತ್ತಿದೆ. ಮಹಾಘಟಬಂಧನ್ ವಿರುದ್ಧ ಬಳಸಿಕೊಳ್ಳಲು ಯಾವುದೇ ಅವಕಾಶವಿಲ್ಲ ಎಂದು ಅದು ತಿಳಿದಿದೆ. ಹಾಗಾಗಿ, ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ತನ್ನ ತಂತ್ರ ಮುಂದುವರೆಸಿದೆ" ಎಂದು ಯಾದವ್ ಹೇಳಿದ್ದಾರೆ. 

ಲಾಲು ಪ್ರಸಾದ್ ಯಾದವ್ ಅವರು ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ  ಲಾಲು, ರಾಬ್ರಿ ದೇವಿ ಮತ್ತು ಇತರ 14 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

"ನಾನು ಈಗ ಸಿಬಿಐ ಕ್ರಮಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವುದಿಲ್ಲ. ಆದರೆ ಶೀಘ್ರದಲ್ಲೇ ನಮ್ಮ ಮನೆಗಳಿಗೆ ಇಡಿ ಕಳುಹಿಸಲಾಗುವುದು ಎಂದು ನಾನು ಹೇಳಲು ಬಯಸುತ್ತೇನೆ," ಎಂದು ಬಿಹಾರ ಡಿಸಿಎಂ ಹೇಳಿದ್ದಾರೆ.

SCROLL FOR NEXT