ಇಡಿ ಅಧಿಕಾರಿಗಳು 
ದೇಶ

ದೆಹಲಿ ಅಬಕಾರಿ ನೀತಿ: ಇಡಿ ದಾಳಿ ನಂತರ ರೂ.1 ಕೋಟಿ ನಗದು ವಶಕ್ಕೆ 

ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತ ಅಕ್ರಮ ಹಣ ವರ್ಗಾವಣೆ ತನಿಖೆ ಸಂಬಂಧ ನಡೆದ ದಾಳಿಯ ನಂತರ ಇಡಿ  ಸುಮಾರು 1 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. 

ನವದೆಹಲಿ: ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತ ಅಕ್ರಮ ಹಣ ವರ್ಗಾವಣೆ ತನಿಖೆ ಸಂಬಂಧ ನಡೆದ ದಾಳಿಯ ನಂತರ ಇಡಿ  ಸುಮಾರು 1 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. 

ದೆಹಲಿ-ಎನ್ ಸಿಆರ್, ಪಂಜಾಬ್ ಮತ್ತು ತೆಲಂಗಾಣದ ರಾಜಧಾನಿ ಹೈದರಾಬಾದಿನ 35 ಕಡೆಗಳಲ್ಲಿ ಶುಕ್ರವಾರ ಇಡಿ ಶೋಧ ಕಾರ್ಯಾಚರಣೆ ನಡೆಸಿತು. ಲಿಕ್ಕರ್ ವ್ಯಾಪಾರಿಗಳು, ವಿತರಣಾ ಕಂಪನಿಗಳು ಮತ್ತು ಅವುಗಳೊಂದಿಗೆ ಸಂಪರ್ಕ ಹೊಂದಿದ್ದ ಸಂಸ್ಥೆಗಳ ವಿರುದ್ಧ ನಡೆಸಿದ ದಾಳಿ ವೇಳೆಯಲ್ಲಿ ಕೋಟ್ಯಂತರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ.

ಕೆಲವು ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಹೇಳಿದೆ. ಆದರೆ, ಇವುಗಳನ್ನು ವಶಕ್ಕೆ ಪಡೆದ ಸ್ಥಳಗಳ ಹೆಸರನ್ನು ಮಾತ್ರ  ಬಹಿರಂಗಪಡಿಸಿಲ್ಲ.

ವಿವಿಧ ಆಲ್ಕೋಹಾಲಿಕ್ ಬೇವರಿಜ್ ಆಮದು ಮತ್ತು ರಫ್ತು ಮಾಡುತ್ತಿದ್ದ ಕಂಪನಿಯೊಂದರ ನಗರದ  ಉದ್ಯಮಿ, ದೆಹಲಿ ಮೂಲದ ಟಿವಿ ವಾಹಿನಿಯೊಂದರ ನಿರ್ದೇಶಕರು ಹಾಗೂ ಪಂಜಾಬಿನ ಮಾಜಿ  ಶಾಸಕರೊಬ್ಬರಿಗೆ ಸೇರಿದ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

 ಇಡಿ ಈವರೆಗೂ 103 ಕ್ಕೂ ಅಧಿಕ ಕಡೆಗಳಲ್ಲಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಮತ್ತಿತರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT