ಕಿರಣ್ ರಿಜಿಜು 
ದೇಶ

ಕೇಜ್ರಿವಾಲ್ ಮತ್ತು ಗ್ಯಾಂಗ್ ಹಿಂದೂ, ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂಬುದು ಅರ್ಥವಾಗುತ್ತಿಲ್ಲ: ಕಿರಣ್ ರಿಜಿಜು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು 'ಅವರ ಗ್ಯಾಂಗ್' ಹಿಂದೂ ಮತ್ತು ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಎಎಪಿ ಮತ್ತು ಅದರ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು 'ಅವರ ಗ್ಯಾಂಗ್' ಹಿಂದೂ ಮತ್ತು ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಎಎಪಿ ಮತ್ತು ಅದರ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ ಸಮಾಜ ಕಲ್ಯಾಣ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಇತ್ತೀಚೆಗೆ ಸಾಮೂಹಿಕ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಡಿಯೋ ವೈರಲ್ ಆಗಿದ್ದು, ಅಲ್ಲಿ ನೆರೆದಿದ್ದ ನೂರಾರು ಜನರು ಹಿಂದೂ ದೇವರು ಮತ್ತು ದೇವತೆಗಳನ್ನು ನಿರಾಕರಿಸುವ ಪ್ರತಿಜ್ಞೆ ಕೈಗೊಂಡಿರುವುದು ಸೆರೆಯಾಗಿದೆ. ಇದಾದ ಬಳಿಕ ಸಚಿವರು ಹೇಳಿಕೆ ನೀಡಿದ್ದಾರೆ.

ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಬೆಳಿಗ್ಗೆ ಸರಣಿ ಟ್ವೀಟ್ ಮಾಡಿರುವ ರಿಜಿಜು, 'ಅರವಿಂದ್ ಕೇಜ್ರಿವಾಲ್ ಮತ್ತು ಅವರ ಗ್ಯಾಂಗ್ ಹಿಂದೂ ಮತ್ತು ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂಬುದಕ್ಕೆ ಕಾರಣ ನನಗೆ ತಿಳಿಯುತ್ತಿಲ್ಲ. ನಾನು ರಾಹುಲ್ ಗಾಂಧಿಯನ್ನು ಅರ್ಥಮಾಡಿಕೊಳ್ಳಬಲ್ಲೆ, ಆದರೆ ಅರವಿಂದ ಕೇಜ್ರಿವಾಲ್ ಬಗ್ಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT