ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಜೈಪುರ: ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ದೆಹಲಿಯ ಸೇನಾ ಭವನದಲ್ಲಿ ಕ್ಲಾಸ್-4 ಉದ್ಯೋಗಿಯಾಗಿ ನೇಮಕಗೊಂಡಿದ್ದ ರಾಜಸ್ಥಾನದ ನಿವಾಸಿ ರವಿ ಪ್ರಕಾಶ್ ಮೀನಾ ಅವರು ಪಾಕಿಸ್ತಾನಿ ಮಹಿಳಾ ಏಜೆಂಟ್‌ನಿಂದ ಹನಿ ಟ್ರ್ಯಾಪ್ ಗೆ ಒಳಗಾಗಿದ್ದರು. ಅವರು ಭಾರತೀಯ ಸೇನೆಯ ಬಗ್ಗೆ ಗೌಪ್ಯ ಮತ್ತು ಕಾರ್ಯತಂತ್ರದ ಮಾಹಿತಿಯನ್ನು ಪಾಕ್ ಮಹಿಳೆಯೊಂದಿಗೆ ಹಂಚಿಕೊಳ್ಳುತ್ತಿದ್ದರು ಎಂದು ರಾಜಸ್ಥಾನದ ಡಿಜಿಪಿ(ಗುಪ್ತಚರ), ಉಮೇಶ್ ಮಿಶ್ರಾ ಹೇಳಿದ್ದಾರೆ.

ತನ್ನ ಬ್ಯಾಂಕ್ ಖಾತೆಗೆ ಜಮೆಯಾದ ಹಣಕ್ಕೆ ಬದಲಾಗಿ ಆತ ಸಾಮಾಜಿಕ ಮಾಧ್ಯಮದ ಮೂಲಕ ಏಜೆಂಟ್‌ಗೆ ಮಾಹಿತಿ ನೀಡುತ್ತಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಂಜಲಿ ತಿವಾರಿ ಎಂಬ ಹೆಸರಿನ ಪಾಕಿಸ್ತಾನಿ ಏಜೆಂಟ್, ತಾನು ಪಶ್ಚಿಮ ಬಂಗಾಳದಲ್ಲಿ ಭಾರತೀಯ ಸೇನಾ ಅಧಿಕಾರಿಯಾಗಿರುವುದಾಗಿ ಹೇಳಿಕೊಂಡಿದ್ದಾಳೆ ಎಂದು ಮಿಶ್ರಾ ಹೇಳಿದ್ದಾರೆ.

ರಾಜಸ್ಥಾನದ ಕರೌಲಿ ಜಿಲ್ಲೆಯ ಸಪೋತಾರಾ ಮೂಲದ ಮೀನಾ ಅವರನ್ನು ಗುಪ್ತಚರ ಸಂಸ್ಥೆಗಳು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಸಿಕ್ಕ ತಾಂತ್ರಿಕ ಪುರಾವೆಗಳು ಮತ್ತು ಅಪರಾಧಕ್ಕೆ ಬಳಸಲಾದ ಮೊಬೈಲ್ ಫೋನ್‌ನ ಪರಿಶೀಲನೆಯ ನಂತರ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!