ಶಶಿ ತರೂರ್ 
ದೇಶ

ಗಾಂಧಿ ಕುಟುಂಬ ಯಾವುದೇ ಪಕ್ಷಪಾತ ಮಾಡುತ್ತಿಲ್ಲ: ಶಶಿ ತರೂರ್

ಗಾಂಧಿ ಕುಟುಂಬದ ಆರ್ಶೀವಾದ ನನಗೂ ಮತ್ತು ನನ್ನ ಪ್ರತಿಸ್ಪರ್ಧಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಇಬ್ಬರಿಗೂ ಇದೆ. ನಮ್ಮಿಬ್ಬರ ವಿಚಾರದಲ್ಲಿ ಯಾವುದೇ ಪಕ್ಷಪಾತ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಶಶಿ ತರೂರ್...

ಮುಂಬೈ: ಗಾಂಧಿ ಕುಟುಂಬದ ಆರ್ಶೀವಾದ ನನಗೂ ಮತ್ತು ನನ್ನ ಪ್ರತಿಸ್ಪರ್ಧಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಇಬ್ಬರಿಗೂ ಇದೆ. ನಮ್ಮಿಬ್ಬರ ವಿಚಾರದಲ್ಲಿ ಯಾವುದೇ ಪಕ್ಷಪಾತ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಶಶಿ ತರೂರ್ ಅವರು ಭಾನುವಾರ ಹೇಳಿದ್ದಾರೆ.

ಮುಂಬೈನಲ್ಲಿರುವ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ಶಶಿ ತರೂರ್, 2024ರ ಚುನಾವಣೆಗೂ ಮುನ್ನ ಕಾಂಗ್ರೆಸ್ ಅನ್ನು ಬಲಪಡಿಸುವುದು ತಮ್ಮ ಗುರಿಯಾಗಿದೆ ಎಂದರು.

ನನಗೆ ಮತ್ತು ಖರ್ಗೆಯವರಿಗೆ ಗಾಂಧಿ ಕುಟುಂಬದ ಆಶೀರ್ವಾದ ಇದೆ. ಏಕೆಂದರೆ ಪಕ್ಷವನ್ನು ಬಲಿಷ್ಠಗೊಳಿಸಲು ನಾವು ಸ್ಪರ್ಧಿಸುತ್ತಿದ್ದೇವೆ ಎಂದರು.

ಅಧ್ಯಕ್ಷ ಹುದ್ದೆಗಾಗಿ 'ಅಧಿಕೃತ ಅಭ್ಯರ್ಥಿ' (ಖರ್ಗೆ) ಮತ್ತು 'ಅನಧಿಕೃತ' ಒಬ್ಬರ(ಶಶಿ ತರೂರ್) ನಡುವೆ ಸಮರ ನಡೆಯುತ್ತಿದೆ ಎಂಬ ಊಹಾಪೋಹವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ತರೂರ್, ಪಕ್ಷ ಬಲಪಡಿಸಲು ನಾವು ಸ್ಪರ್ಧಿಸಿದ್ದೇವೆ. ಪಕ್ಷದಲ್ಲಿ ಬದಲಾವಣೆಯ ಅಗತ್ಯ ಇದೆ. ನಾನೇ ಬದಲಾವಣೆಯ ಪ್ರವರ್ತಕ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್